ಬೊಮ್ಮಾಯಿ ನಿವಾಸಕ್ಕೆ ಬಂದ ಬಾಲಚಂದ್ರ ಜಾರಕಿಹೊಳಿ, ಶ್ರೀಮಂತ ಪಾಟೀಲ, ಮಹೇಶ ಕುಮಟಳ್ಳಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೆಎಂಎಫ್ ಚೇರಮನ್, ಅರಬಾವಿ ಶಾಸಕ, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಶುಕ್ರವಾರ ರಾತ್ರಿ 11 ಗಂಟೆ ಹೊತ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಆಗಮಿಸಿದ್ದಾರೆ.
ಮಾಜಿ ಸಚಿವ ಶ್ರೀಮಂತ ಪಾಟೀಲ, ಶಾಸಕ ಮಹೇಶ ಕುಮಟಳ್ಳಿ ಮತ್ತು ಪ್ರತಾಪಗೌಡ ಪಾಟೀಲ ಜೊತೆಗೆ ಮುಖ್ಯಮಂತ್ರಿಗಳ ಆರ್.ಟಿ.ನಗರ ನಿವಾಸಕ್ಕೆ ಬಾಲಚಂದ್ರ ಜಾರಕಿಹೊಳಿ ಆಗಮಿಸಿದ್ದಾರೆ.
ಬಸವರಾಜ ಬೊಮ್ಮಾಯಿ ತುಮಕೂರಿನಿಂದ ವಾಪಸ್ಸಾಗುತ್ತಿದ್ದಂತೆ ಬಾಲಚಂದ್ರ ಜಾರಕಿಹೊಳಿ ಮತ್ತು ಮೂವರು ಶಾಸಕರು ಎಂಟ್ರಿ ಕೊಟ್ಟಿದ್ದಾರೆ.
ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಜಾರಕಿಹೊಳಿ ಕುಟುಂಬ ಮತ್ತು ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ, ಪ್ರತಾಪಗೌಡ ಪಾಟೀಲ, ಶ್ರೀಮಂತ ಪಾಟೀಲ ಮತ್ತು ಮಹೇಶ ಕುಮಟಳ್ಳಿ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ ಜಾರಕಿಹೊಳಿ ನಿವಾಸದಲ್ಲಿ ತೀವ್ರ ರಾಜಕೀಯ ಚಟುವಟಿಕೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಬಾಲಚಂದ್ರ ಜಾರಕಿಹೊಳಿ ಸಿಎಂ ನಿವಾಸಕ್ಕೆ ಆಗಮಿಸಿರುವುದು ಕುತೂಹಲ ಮೂಡಿಸಿದೆ. ಬಸವರಾಜ ಬೊಮ್ಮಾಯಿ ಅವರನ್ನು ಯಾವ ರೀತಿಯಲ್ಲಿ ಸಮಾಧಾನಪಡಿಸಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ನಾನು ಆಕಾಂಕ್ಷಿಯಲ್ಲ
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೊರಬಂದ ಬಾಲಚಂದ್ರ ಜಾರಕಿಹೊಳಿ, ನಾನು ಸಚಿವಸ್ಥಾನದ ಆಕಾಂಕ್ಷಿಯಲ್ಲ. ರಮೇಶ ಜಾರಕಿಹೊಳಿ ಅವರ ಪ್ರಕರಣ ಮುಕ್ತಾಯವಾದ ನಂತರ ಅವರನ್ನು ಮಂತ್ರಿ ಮಾಡುವುದಾಗಿ ಬಿಜೆಪಿ ವರಿಷ್ಠರು ತಿಳಿಸಿದ್ದಾರೆ. ಶ್ರೀಮಂತ ಪಾಟೀಲ ಅವರಿಗೆ ಸಚಿವಸ್ಥಾನ ನೀಡಬೇಕು ಎಂದರು.
ರಮೇಶ ಜಾರಕಿಹೊಳಿ ನಿವಾಸದಲ್ಲಿ ಅತೃಪ್ತರ ಸಭೆ? ಮತ್ತೆ ಶುರುವಾಯ್ತಾ ಭಿನ್ನಮತೀಯ ಚಟುವಟಿಕೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ