Latest

ತಮ್ಮ ಖಾತೆ ಬಗ್ಗೆ ಸಚಿವೆ ಶಶಿಕಲಾ ಜೊಲ್ಲೆ ಮೊದಲ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ, ವಿಜಯಪುರ: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಕೊಟ್ಟ ಖಾತೆ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಸಚಿವೆ ಶಶಿಕಲಾ ಜೊಲ್ಲೆ ತಮಗೆ ನೀಡಿರುವ ಮುಜರಾಯಿ ಇಲಾಖೆ, ಹಜ್, ವಕ್ಫ್ ಖಾತೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ, ಮುಜರಾಯಿ, ವಕ್ಫ್ ಖಾತೆಯನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಮಹಿಳಾ ಮತ್ತು ಮಕ್ಕಳ ಖಾತೆಯಿಂದ ಹಿಂಬಡ್ತಿ ಎಂದೆನಿಸಿಲ್ಲ. ಈ ಹಿಂದೆ ಇಬ್ಬರು ಪುರುಷ ಸಚಿವರಿಗೆ ಈ ಖಾತೆ ನೀಡಲಾಗಿತ್ತು ಎಂದು ಹೇಳಿದರು.

ನನಗೆ ಕೊಟ್ಟ ಜವಾಬ್ದಾರಿಯನ್ನು ಸಂತೋಷದಿಂದ ಸ್ವೀಕರಿಸಿ, ನಿಭಾಯಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇಲಾಖೆಯಲ್ಲಿನ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದರು.

ನನ್ನ ಮೇಲೆ ವಿಶ್ವಾಸವಿಟ್ಟೇ ಈ ಖಾತೆಗಳನ್ನು ಕೊಡಲಾಗಿದೆ. ಇಂತಹ ಖಾತೆ ನಿರ್ವಹಿಸುವುದು ಪುಣ್ಯದ ಕೆವಲಸ ಎಂದೇ ಭಾವಿಸುತ್ತೇನೆ ಎಂದು ಅವರು ತಿಳಿಸಿದರು.

ಬೊಮ್ಮಾಯಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ; ಅರಗ ಜ್ಞಾನೇಂದ್ರಗೆ ಗೃಹ, ಸುನೀಲ್ ಕುಮಾರ್ ಗೆ ಇಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button