Latest

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್; ಶಿಕ್ಷಕ ದಂಪತಿ ಬಂಧನ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಪ್ರಾಜೆಕ್ಟ್ ಹೆಸರಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಅತ್ಯಾಚಾರವೆಸಗಿ ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಡಿ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಆತನ ಪತ್ನಿಯನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡಿದ್ದ ಶಿಕ್ಷಕ ಆಕೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಫೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಮನೆಯಿಂದ ಹಣ ತರುವಂತೆ ಬೆದರಿಸುತ್ತಿದ್ದ.

Home add -Advt

2018ರಿಂದ ಶಿಕ್ಷಕ ಕೃತ್ಯವೆಸಗುತ್ತಿರುವುದಾಗಿ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಬಂಧಿಸಲಾಗಿದೆ.

ರಾಜೀನಾಮೆ ಎಚ್ಚರಿಕೆ ನೀಡಿದ್ರಾ ಪ್ರವಾಸೋದ್ಯಮ ಸಚಿವ

Related Articles

Back to top button