Latest

ಶಿವಳ್ಳಿ ರೆಸ್ಟೋರೆಂಟ್ ನಲ್ಲಿ ಉಪಹಾರ ಸೇವಿಸಿದ ಬೊಮ್ಮಾಯಿ & ಟೀಮ್ ;  ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿಗೆ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:   ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.
ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ತೀರ್ಮಾನ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುತ್ತೇನೆ. ನಂತರ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆಯುತ್ತೇನೆ ಎಂದು ಅವರು ತಿಳಿಸಿದರು.
ಮೈಸೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿನ ಶಿವಳ್ಳಿ ರೆಸ್ಟೋರೆಂಟ್ ನಲ್ಲಿ ಇಂದು ಬೆಳಗಿನ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ, ಎಸ್ ಟಿ ಸೋಮಶೇಖರ, ಬೈರತಿ ಬಸವರಾಜ, ಡಾ. ನಾರಾಯಣಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
*ಚಾಮುಂಡೇಶ್ವರಿ ದರ್ಶನ ಮಾಡಿದ ಬೊಮ್ಮಾಯಿ*
ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ ಸಿಎಂ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್,  ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ದರ್ಶನ ಪಡೆದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button