Latest

48 ಗಂಟೆಗಳಲ್ಲಿ ಅಭ್ಯರ್ಥಿಗಳ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಬಿಡುಗಡೆ ಮಾಡಿ: ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೊರ್ಟ್ ಆದೇಶ

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಅನುಮತಿ ಇಲ್ಲದೇ ಹಿಂತೆಗೆದುಕೊಳ್ಳುವಂತಿಲ್ಲ

 

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಎಲ್ಲಾ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿ ಘೋಷಣೆಯಾದ 48 ಗಂಟೆಗಳ ಒಳಗೆ ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳ ಬಗ್ಗೆ ಮಾಹಿತಿ ಬಿಡುಗಡೆ ಮಾಡಬೇಕು ಎಂದು ಸೂಚಿಸಿದೆ.

ಬಿಹಾರ ಚುನಾವಣೆ ವೇಳೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಕ್ರಿಮಿನಲ್ ಅಪರಾಧಗಳ ಬಗ್ಗೆ ಪ್ರಕಟಿಸಲು ವಿಫಲವಾಗಿವೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಅನುಮತಿ ಇಲ್ಲದೇ ಹಿಂತೆಗೆದುಕೊಳ್ಳುವಂತಿಲ್ಲ. ಚುನಾವಣೆ ವೇಳೆ ಅಭ್ಯರ್ಥಿ ಘೋಷಣೆಯಾದ 48 ಗಂಟೆಗಳ ಒಳಗಾಗಿ ಅವರ ಪ್ರಕರಣಗಳ ಬಗ್ಗೆ ವರದಿ ಪ್ರಕಟಿಸಬೇಕು ಎಂದು ತೀರ್ಪು ನೀಡಿದೆ.

ಅಲ್ಲದೇ ಜನಪ್ರತಿನಿಧಿಗಳ ಕೋರ್ಟ್ ಜಡ್ಜ್ ಗಳು ಮುಂದಿನ ಆದೇಶದವರೆಗೆ ತಮ್ಮ ಸೇವೆಯಲ್ಲಿ ಮುಂದುವರೆಯಬೇಕು ಎಂದು ತಿಳಿಸಿದೆ.
ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button