ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಚಕ್ ಬೌನ್ಸ್ ಪ್ರಕರಣಕ್ಕೆ ಹೈಕೋರ್ಟ್ ಮರುಜೀವನೀಡಿದ್ದು, ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಸಾಲಕ್ಕೆ ಪ್ರತಿಯಾಗಿ ಸಹಕಾರಿ ಬ್ಯಾಂಕ್ ಗೆ ರಮೇಶ್ ಜಾರಕಿಹೊಳಿ ನೀಡಿದ್ದ 5.2 ಕೊಟಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಜೆ ಎಂಎಫ್ ಸಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಮರುವಿಚಾರಣೆ ನಡೆಸುವಂತೆ ಆದೇಶ ನೀಡಿದೆ.
ರಮೇಶ್ ಜಾರಕಿಹೊಳಿ ನೀಡಿದ ಚೆಕ್ ಬೌನ್ಸ್ ಆಗಿದೆ ಎಂದು ಬೀರೇಶ್ವರ ಕ್ರೆಡಿಕ್ ಕೋ ಆಪರೇಟಿವ್ ಸೊಸೈಟಿ ಖಾಸಗಿ ದೂರು ದಾಖಲಿಸಿತ್ತು.
ಆದರೆ ಸೊಸೈಟಿ ಪರ ವಕೀಲರು ಗೈರಾದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಕೇಸ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸೊಸೈಟಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೊರ್ಟ್, ಚಿಕ್ಕೋಡಿ ಕೋರ್ಟ್ ಪ್ರಕ್ರಿಯೆ ಕಾನೂನಿಗೆ ಅನುಗುಣವಾಗಿಲ್ಲ ಎಂದಿರುವ ನ್ಯಾಯಾಲಯ, ವಿಚಾರಣೆಗೆ ಪರಿಗಣಿಸುವ ಮುನ್ನ ರಮೇಶ್ ಗೆ ನೋಟೀಸ್ ನೀಡಿದ ಕ್ರಮ, ನಂತರ ಪ್ರಕರಣ ವಜಾ ಆದೇಶ ರದ್ದುಗೊಳಿಸಿದ್ದು ಸರಿಯಲ್ಲ. ಮರು ವಿಚಾರಣೆ ನಡೆಸಿ ಸೂಕ್ತ ಆದೇಶ ನೀಡುವಂತೆ ಹೈಕೋರ್ಟ್ ಸೂಚಿಸಿದೆ.
ಸರಕಾರಿ ಕಾರ್ಯಕ್ರಮಗಳಲ್ಲಿ ಇವೆಲ್ಲ ನಿಷೇಧ! ರಾಜ್ಯ ಸರಕಾರದ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ