ಯಡೂರಿನ ಶ್ರೀ ವೀರಭದ್ರೇಶ್ವರ ದರ್ಶನ ಹಾಗೂ ಭದ್ರಕಾಳೇಶ್ವರಿ ದೇವಿ ದರ್ಶನ ಪಡೆದ ಸಚಿವೆ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ; ಚಿಕ್ಕೊಡಿ: ಚಿಕ್ಕೋಡಿ ತಾಲೂಕಿನ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ಶ್ರೀ ವೀರಭದ್ರೇಶ್ವರ ಹಾಗೂ ಭದ್ರಕಾಳೇಶ್ವರಿ ದೇವಿಯ ದರ್ಶನ ಪಡೆದ ಮುಜರಾಯಿ, ಹಜ್ ಮತ್ತು ವಕ್ಫ ಸಚಿವರಾದ ಶಶಿಕಲಾ ಜೊಲ್ಲೆ, ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.
ನಂತರ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ತೆರಳಿ ಶ್ರಿಶೈಲ್ ಜಗದ್ಗುರುಗಳು ಹಾಗೂ ಶ್ರೀ 1008 ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಗಳ ಆಶೀರ್ವಾದವನ್ನು ಪಡೆದುಕೊಂಡರು.
ಈ ವೇಳೆ ಮಾತನಾಡಿದ ಶ್ರೀಶೈಲ್ ಜಗದ್ಗುರುಗಳು ಮಾತನಾಡಿ ಎರಡನೇ ಬಾರಿಗೆ ಸಚಿವರಾಗಿ ಅದರಲ್ಲೂ ವಿಶೇಷವಾಗಿ ಮುಜರಾಯಿ ಇಲಾಖೆಯ ಖಾತೆಯನ್ನು ಪಡೆದುಕೊಂಡಿದ್ದಕ್ಕೆ ನಮ್ಮ ಭಾಗದ ಸುದೈವ ಎಂದು ಶ್ರೀಶೈಲ ಜಗದ್ಗುರುಗಳು ಬಣ್ಣಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಶಶಿಕಲಾ ಜೊಲ್ಲೆಯವರು ಮುಜರಾಯಿ ಇಲಾಖೆಯ ನನಗೆ ಸಿಕ್ಕಿದ್ದು ಖುಷಿ ತಂದಿದೆ. ಈ ಮೂಲಕ ರಾಜ್ಯದಲ್ಲಿರುವ ಎಲ್ಲಾ ದೇವಸ್ಥಾನಗಳ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ಈ ಸಂಧರ್ಭದಲ್ಲಿ ಮನೋಜ ಖಿಚಡೆ, ಅಜೀತ ಸೂರ್ಯವಂಶಿ, ಅಮರ ಬೋರಗಾಂವೆ, ವಿಕ್ರಾಂತ ದೇಸಾಯಿ, ಸಂತೋಷ ಜೋಶಿ, ಮನೋಹರ ಮೋಹಿತೆ, ಯಡೂರ ಗ್ರಾ ಪಂ ಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಸೇರಿದಂತೆ ಯಡೂರವಾಡಿ, ಚಂದೂರ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ