Latest

ನೆಗೆಟಿವ್ ರಿಪೋರ್ಟ್ ಇದ್ದರೆ ಮಾತ್ರ ರಾಜ್ಯಕ್ಕೆ ಪ್ರವೇಶ; ಗಡಿ ಜಿಲ್ಲೆಗಳಲ್ಲಿ ಸಿಎಂ ಖುದ್ದು ಪರಿಶೀಲನೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ವೇಳೆ ಮಾತನಾಡಿದ ಸಿಎಂ, ಕೋವಿಡ್ ಸ್ಥಿತಿಗತಿಗಳ ಪರಿಶೀಲನೆಗಾಗಿ ಆಗಮಿಸಿದ್ದೇನೆ. ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಗಡಿ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮ ಅನಿವಾರ್ಯವಾಗಿದೆ. ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ಎಲ್ಲಾ ಗಡಿ ಜಿಲ್ಲೆಗಳಿಗೂ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದರು.

Home add -Advt

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸುಧಾಕರ್, ಶಾಸಕರಾದ ಯು.ಟಿ.ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಸೇರಿದಂತೆ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

Related Articles

Back to top button