Latest

ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯಾರ್ಥಿ ಸಾವು ಪ್ರಕರಣ; ತನಿಖೆಗೆ ಆದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಧ್ವಜಾರೋಹಣ ಮಾಡಲು ಶಾಲೆಯಲ್ಲಿ ಕಂಬ ನೆಡುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಪ್ರಕರಣಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಂತಾಪ ತೀವ್ರ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ತುಮಕೂರು ಜಿಲ್ಲೆ ಕರೀಕೆರೆ ಗ್ರಾಮದಲ್ಲಿ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ತಿಳಿದು ಆಘಾತವಾಯಿತು. ಜೊತೆಗೆ ಪವನ್ ಮತ್ತು ಶಶಾಂಕ್ ಎಂಬ ಇನ್ನೂ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಯಿತು. ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳನ್ನು ತಿಳಿಸಲು ಬಯಸುತ್ತೇನೆ. ಅವರ ದುಃಖ ಶಬ್ದಗಳಿಂದ ಶಮನ ಮಾಡಲು ಸಾಧ್ಯವಿಲ್ಲ. ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸೆಗೆ ಕೂಡಲೇ ಬೇಕಾದ ಎಲ್ಲ ಸೌಲಭ್ಯ ಒದಗಿಸುವಂತೆ ತಿಳಿಸಿದ್ದೇನೆ. ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ತನಿಖೆ ನಡೆಸಲು ಸೂಚಿಸುತ್ತೇನೆ ಎಂದು ತಿಳಿಸಿದ್ದಾರೆ.

ಧ್ವಜಸ್ಥಂಭ ನಿಲ್ಲಿಸುವಾಗ ದುರ್ಘಟನೆ: ಬಾಲಕನ ಸಾವು

ಗ್ಯಾಸ್ ಸೋರಿಕೆಯಾಗಿ ಬೆಂಕಿ; ಧಗಧಗನೆ ಹೊತ್ತಿ ಉರಿದ ಮನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button