Latest

ವಿಮಾನ ನಿಲ್ದಾಣದಲ್ಲಿ ಫೈರಿಂಗ್; ಫ್ಲೈಟ್ ಹತ್ತಲು ನೂಕುನುಗ್ಗಲು; ಪ್ರಾಣ ಉಳಿಸಿಕೊಳ್ಳಲು ಅಪ್ಘಾನ್ ತೊರೆಯುತ್ತಿರುವ ಜನ

ಪ್ರಗತಿವಾಹಿನಿ ಸುದ್ದಿ; ಕಾಬೂಲ್: ಅಪ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚುತ್ತಿದ್ದು, ಸಂಸತ್ ಭವನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೊಂದೆಡೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದಿದ್ದು, ಐವರು ಸಾವನ್ನಪ್ಪಿದ್ದಾರೆ.

ತಾಲಿಬಾನ್ ಉಗ್ರರು ಅಪ್ಘಾನಿಸ್ತಾನ ವಶಪಡಿಸಿಕೊಳ್ಳುತ್ತಿದ್ದಂತೆ ಅಪ್ಘಾನ್ ನಿರ್ಗಮಿತ ಅಧ್ಯಕ್ಷ ಅಶ್ರಫ್ ಘನಿ ದೇಶ ಬಿಟ್ಟು ಪಲಾಯನಗೊಂಡಿದ್ದು, ಓಮನ್ ನಲ್ಲಿ ಪತ್ತೆಯಾಗಿದ್ದಾರೆ. ಇತ್ತ ಕಾಬೂಲ್ ತಾಲಿಬಾನಿಗಳ ವಶವಾಗುತ್ತಿದ್ದಂತೆ ದೇಶಬಿಟ್ಟು ಹೋಗುವವರ ಸಂಖ್ಯೆ ಹೆಚ್ಚಿದ್ದು, ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದೆ.

ಕಾಬೂಲ್ ವಿಮಾನ ನಿಲ್ದಾಣವನ್ನು ಅಮೆರಿಕನ್ ಟ್ರೂಪ್ ಸೇನೆ ವಶಕ್ಕೆ ಪಡೆದಿದ್ದು, ಬೇರೆ ಬೇರೆ ದೇಶಗಳ ನಿವಾಸಿಗಳನ್ನು ಅಪ್ಘಾನಿಸ್ತಾನದಿಂದ ಏರ್ ಲಿಫ್ಟ್ ಮಾಡಲು ನೆರವು ನೀಡುತ್ತಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಜನರು ದೇಶ ತೊರೆಯುತ್ತಿದ್ದು, ವಿಮಾನ ನಿಲ್ದಾಣದಲ್ಲಿ ಜನರು ಗುಂಪು ಗುಂಪಾಗಿ ವಿಮಾನಗಳನ್ನು ಹತ್ತುತ್ತಿದ್ದು ನೂಕು ನುಗ್ಗಲು ಚದುರಿಸಲು ಅಮೆರಿಕನ್ ಸೇನೆ ಗುಂಡು ಹಾರಿಸಿದೆ. ಗುಂಡಿನ ದಾಳಿಗೆ ಐವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button