Latest

15 ದಿನದೊಳಗೆ ಆಧಾರ್ ಕಾರ್ಡ್ ಲಿಂಕ್ ಗೆ ಸಿಎಂ ಬೊಮ್ಮಾಯಿ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್ ಲೋಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದರು.

ವಸತಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ-(ನಗರ) ಎಎಚ್ ಪಿ- 1.8 ಲಕ್ಷ ಮನೆಗಳು ಕಾಮಗಾರಿ ಪ್ರಾರಂಭವಾಗಿಲ್ಲ. ಈ ಯೋಜನಗೆ ಎಸ್ ಸಿ ಎಸ್ ಪಿ/ ಟಿಎಸ್ ಪಿ, ಹಿಂದುಳಿದ ವರ್ಗಗಳು ಹಾಗೂ ಕಾರ್ಮಿಕ ಫಲಾನುಭವಿಗಳ ವಂತಿಗೆ ಮೊತ್ತವನ್ನು ಆಯಾ ಇಲಾಖೆಗಳ ಯೋಜನೆಗಳಡಿ ಪಡೆದುಕೊಂಡು, ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಬೆಂಗಳೂರು ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡಿ 42,361 ಮನೆ ನಿರ್ಮಾಣವಾಗುತ್ತಿದ್ದು ಬಾಕಿ ಮನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸುವಂತೆ ತಿಳಿಸಿದರು.

ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಗಳಡಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆಗೆ ಸಿದ್ಧತೆ ನಡೆಸಿಕೊಳ್ಳುವಂತೆ ತಿಳಿಸಿದರು.

ಪ್ರವಾಹ ಸಂದರ್ಭದಲ್ಲಿ ಮನೆ ಹಾನಿಗೆ ನೀಡಬೇಕಾದ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ತಿಳಿಸಿದರು.

ವಸತಿ ಸಚಿವ ವಿ. ಸೋಮಣ್ಣ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಕಾರ್ಯದರ್ಶಿ ವಿ. ಪೊನ್ನುರಾಜ್, ವಸತಿ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಳಗಾವಿ, ವಿಜಯಪುರಕ್ಕೆ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಮೂರು ಇಲಾಖೆಗಳ ಪ್ರಗತಿ ಪರಿಶೀಲನೆ; ಹಲವು ಮಹತ್ವದ ನಿರ್ಧಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button