ಕರ್ನಾಟಕ ರಾಜ್ಯದ ಕನ್ನಡಿಗರು ಅಪಘಾನಿಸ್ಥಾನ ದೇಶದಲ್ಲಿ ವಿವಿಧ ವೃತ್ತಿಯಲ್ಲಿ ತೊಡಗಿದ್ದು, ಆ ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳು ಜರುಗುತ್ತಿರುವುದರಿಂದ, ಆ ದೇಶದಲ್ಲಿ ನೆಲೆಸಿರುವ ಕನ್ನಡಿಗರ ಸೂಕ್ತ ರಕ್ಷಣೆ ಮತ್ತು ಸುರಕ್ಷಿತವಾಗಿ ಕರೆ ತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಈ ಮೂಲಕ ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ.
— Laxmi Hebbalkar (@laxmi_hebbalkar) August 18, 2021
ಪ್ರಗತಿವಾಹಿನಿ ಸುದ್ದಿ ಬೆಳಗಾವಿ – ಅಪಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಮುಂದಾಗುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದ ಕನ್ನಡಿಗರು ಅಪಘಾನಿಸ್ಥಾನದಲ್ಲಿ ವಿವಿಧ ವೃತ್ತಿಯಲ್ಲಿ ತೊಡಗಿದ್ದಾರೆ. ಆ ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳು ಜರುಗುತ್ತಿರುವುದರಿಂದ, ಅಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ಮತ್ತು ಸುರಕ್ಷಿತವಾಗಿ ಕರೆ ತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಈ ಮೂಲಕ ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ