Kannada NewsKarnataka NewsLatest

ಚುನಾವಣೆ : ಬಹಿರಂಗ ಪ್ರಚಾರ ಸೇರಿ ಹಲವು ಮಾರ್ಗಸೂಚಿ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯಲ್ಲಿ ೨೦೨೧ ನೇ ಸಾಲಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ಕೋವಿಡ್ -೧೯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ನಿರ್ದೇಶನಗಳನ್ನು ನೀಡಿದೆ.
ಅಭ್ಯರ್ಥಿಯೂ ಸೇರಿ ಗರಿಷ್ಟ ೫ ಜನ ಬೆಂಬಲಿಗರೊಂದಿಗೆ ಫೇಸ್ ಮಾಸ್ಕ್ (ಈಚಿಛಿe ಒಚಿsಞ) ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸಬಹುದು. ಪ್ರಚಾರಕ್ಕೆ ಯಾವುದೇ ವಾಹನಗಳನ್ನು ಬಳಸುವುದನ್ನು ಹಾಗೂ ಗುಂಪು ಗುಂಪಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಪ್ರಚಾರದ ಸಂದರ್ಭದಲ್ಲಿ ಫೇಸ್ ಮಾಸ್ಕ್ (ಈಚಿಛಿe ಒಚಿsಞ) ಅನ್ನು ಕಡ್ಡಾಯವಾಗಿ ಧರಿಸಬೇಕು. ಇಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಚಾರ ಕೈಗೊಳ್ಳಬಹುದು. ಅವುಗಳ ವೆಚ್ಚ ವಿವರಗಳನ್ನು ಸಲ್ಲಿಸಬೇಕು.
ಅಲ್ಲದೇ, ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಫೇಸ್ ಮಾಸ್ಕ್ (ಈಚಿಛಿe ಒಚಿsಞ) ಮತ್ತು ಕೈ ಗವಸು ಧರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ   –   ನಿಷೇಧಾಜ್ಞೆ ಜಾರಿ

 

ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯನ್ನು ದಿನಾಂಕವನ್ನು ಘೋಷಿಸಿದ್ದು, ಬೆಳಗಾವಿ ಮಹಾನಗರಪಾಲಿಕೆಯ ಕೌನ್ಸಿಲರ್‌ಗಳ ಚುನಾವಣೆಯ ಕಾರ್ಯಕ್ಕಾಗಿ ೧೨ ಚುನಾವಣಾಧಿಕಾರಿಗಳ ಕಾರ್ಯಾಲಯಗಳನ್ನು ಸ್ಥಾಪಿಸಲಾಗಿದೆ.
ಬೆಳಗಾವಿ ಮಹಾನಗರಪಾಲಿಕೆಯ ಕೌನ್ಸಿಲರ್‌ಗಳು ಚುನಾವಣಾ ಕಾರ್ಯಕ್ಕಾಗಿ ವ್ಯವಸ್ಥೆ ಮಾಡಲಾಗಿರುವ ೧೨ ಚುನಾವಣಾಧಿಕಾರಿಗಳ ಕಾರ್ಯಾಲಯಗಳಲ್ಲಿ ನಾಮಪತ್ರ ಸಲ್ಲಿಕೆ ಕಾಲಕ್ಕೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮುಂಜಾಗೃತಾ ಕ್ರಮವಾಗಿ ಚುನಾವಣಾಧಿಕಾರಿಗಳ ಕಾರ್ಯಾಲಯಗಳ ಸುತ್ತಮುತ್ತ ೧೦೦ ಮೀಟರ್ ವ್ಯಾಪ್ತಿಯಲ್ಲಿ ಅಗಸ್ಟ್ ೧೮ರಿಂದ ೨೩ರವರೆಗೆ ಪ್ರತಿದಿನ ಮುಂಜಾನೆ ೧೦ ಗಂಟೆಯಿಂದ ಸಾಯಂಕಾಲ ೫ ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರಾದ ಡಾ. ಕೆ. ತ್ಯಾಗರಾಜನ್ ಆದೇಶವನ್ನು ಹೊರಡಿಸಿದ್ದಾರೆ.

ಆಗಸ್ಟ್ ೧೬ ರಿಂದ ೨೩ ರವರೆಗೆ ನಾಮಪತ್ರಗಳ ಸಲ್ಲಿಕೆ ಮಾಡಲು ಹೆಚ್ಚಿನ ಸಂಖ್ಯೆಯ ಉಮೇದುವಾರರು ಹಾಗೂ ಅವರ ಬೆಂಬಲಿಗರು ಮತ್ತು ಸಾರ್ವಜನಿಕರು ಸೇರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಚುನಾವಣಾಧಿಕಾರಿಗಳ ಕಾರ್ಯಾಲಯಗಳ ಸುತ್ತಮುತ್ತಲು ೧೦೦ ಮೀಟರ್ ವ್ಯಾಪ್ತಿಯಲ್ಲಿ ನಿಯಮಾನುಸಾರ ನಿಷೇಧಾಜ್ಞೆ ವಿಧಿಸುವಂತೆ ಆದೇಶವನ್ನು ಹೊರಡಿಸಿರುತ್ತಾರೆ.
ಚುನಾವಣಾಧಿಕಾರಿಗಳ ಕಾರ್ಯಾಲಯಗಳು :
೧. ಬೆಳಗಾವಿ ಮಹಾನಗರಪಾಲಿಕೆ ವಲಯ ಕಚೇರಿ ಉತ್ತರ-೨ ವಿಶ್ವೇಶ್ವರಯ್ಯ ನಗರ ಬೆಳಗಾವಿ,
೨. ಮಹಾನಗರಪಾಲಿಕೆಯ ಕಂದಾಯ ಶಾಖೆಯ ವಲಯ ಕಚೇರಿ ಉತ್ತರ-೧ ಕೋನವಾಳ ಗಲ್ಲಿ ಬೆಳಗಾವಿ,
೩. ಮಹಾನಗರಪಾಲಿಕೆಯ ಲೋಕೋಪಯೋಗಿ ಶಾಖೆಯ ವಲಯ ಕಚೇರಿ ಉತ್ತರ-೧ ಕೋನವಾಳ ಗಲ್ಲಿ ಬೆಳಗಾವಿ,
೪. ಬೆಳಗಾವಿ ಮಹಾನಗರ ಪಾಲಿಕೆ ಸಮುದಾಯಭವನ ಕೋನವಾಳಗಲ್ಲಿ ಬೆಳಗಾವಿ,
೫. ಬೆಳಗಾವಿ ಮಹಾನಗರ ಪಾಲಿಕೆ ಮುಖ್ಯ ಕಚೇರಿಯಲ್ಲಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಶಾಸಕರ ಕೊಠಡಿ,
೬. ಬೆಳಗಾವಿ ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯಲ್ಲಿ ಉಪಮಾಪೌರರ ಕೊಠಡಿ,
೭. ಬೆಳಗಾವಿ ಮಹಾನಗರಪಾಲಿಕೆಯ ಕಂದಾಯ ಶಾಖೆಯ ವಲಯ ಕಚೇರಿ ದಕ್ಷಿಣ-೧ ಗೋವಾವೆಸ್ ಕಾಂಪ್ಲೆಕ್ಸ್ ಬೆಳಗಾವಿ,
೮. ಮಹಾನಗರಪಾಲಿಕೆಯ ಮುಖ್ಯ ಕಚೇರಿಯಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಕೊಠಡಿ,
೯. ಮಹಾನಗರಪಾಲಿಕೆಯ ಕಂದಾಯ ಶಾಖೆಯ ವಲಯ ಕಚೇರಿ ದಕ್ಷಿಣ-೧ ಗೋವಾವೆಸ್ ಕಾಂಪ್ಲೆಕ್ಸ್ ಬೆಳಗಾವಿ,
೧೦. ಮಹಾನಗರಪಾಲಿಕೆಯ ಲೋಕೋಪಯೋಗಿ ಶಾಖೆಯ ವಲಯ ಕಚೇರಿ ದಕ್ಷಿಣ-೧ ಗೋವಾವೆಸ್ ಕಾಂಪ್ಲೆಕ್ಸ್ ಬೆಳಗಾವಿ,
೧೧. ಬೆಳಗಾವಿ ಮಹಾನಗರಪಾಲಿಕೆಯ ಕಂದಾಯ ಶಾಖೆಯ ವಲಯ ಕಚೇರಿ ಅಶೋಕ್ ನಗರ ಬೆಳಗಾವಿ,
೧೨. ಮಹಾನಗರಪಾಲಿಕೆಯ ಲೋಕೋಪಯೋಗಿ ಶಾಖೆಯ ವಲಯ ಕಚೇರಿ ದಕ್ಷಿಣ-೨ ಗೋವಾವೆಸ್ ಕಾಂಪ್ಲೆಕ್ಸ್ ಬೆಳಗಾವಿ.
ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಕೆ ಕಾಲಕ್ಕೆ ಕೋವಿಡ್-೧೯ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವುದು, ನಿಷೇಧಾಜ್ಞೆ ಅವಧಿಯಲ್ಲಿ ಚುನಾವಣಾಧಿಕಾರಿಗಳ ಕಾರ್ಯಾಲಯದ ೧೦೦ ಮೀಟರ್ ಸುತ್ತಳತೆಯಲ್ಲಿ ಉಮೇದುವಾರರು ಚುನಾವಣಾ ಪ್ರಕ್ರಿಯೆ ಅಧಿಕಾರಿ ಸಿಬ್ಬಂದಿಯವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಚುನಾವಣಾಧಿಕಾರಿಗಳ ಕಾರ್ಯಾಲಯದ ಸುತ್ತಮುತ್ತ ಯಾವುದೇ ಸಭೆ-ಸಮಾರಂಭಗಳು ನಡೆಯದಂತೆ ನಿಷೇಧಾಜ್ಞೆ ವಿಧಿಸಲಾಗಿದೆ. ನಿಷೇಧದ ಅವಧಿಯಲ್ಲಿ ಚುನಾವಣಾಧಿಕಾರಿಗಳ ಕಾರ್ಯಾಲಯದ ಸುತ್ತ ೫ಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ .
ನಿಷೇಧಾಜ್ಞೆಯ ಅವಧಿಯಲ್ಲಿ ಚುನಾವಣಾಧಿಕಾರಿಗಳ ಕಾರ್ಯಾಲಯಗಳ ಸುತ್ತಲಿನ ಸ್ಥಳದಲ್ಲಿ ಘೋಷಣೆ ಮಾಡುವುದು ಧ್ವನಿವರ್ಧಕಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.
ಈ ನಿಷೇಧಾಜ್ಞೆ ಅಂತ್ಯಕ್ರಿಯೆ ಮೆರವಣಿಗೆಗಳಿಗೆ ಮತ್ತು ಇನ್ನಿತರ ಕಾರಣಗಳಿಗೆ ಅನುಮತಿ ಪಡೆದು ತೆಗೆಯಲಾದ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ. ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಲಂ ೧೮೮ ಭಾರತೀಯ ದಂಡ ಸಂಹಿತೆಯ ಪ್ರಕಾರ ಕಾನೂನು ಕ್ರಮವನ್ನು ಜರಗಿಸಲು ಸಂಬಂಧಪಟ್ಟ ಪಿ.ಐ ರವರಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರಾದ ಡಾ. ಕೆ. ತ್ಯಾಗರಾಜನ್ ಆದೇಶವನ್ನು ಹೊರಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊದಲ ಸಭೆಯಲ್ಲೇ ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಆದೇಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button