ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಅವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿ ಕರ್ತವ್ಯಲೋಪವೆಸಗಿದ್ದ ಮೂವರು ಪಿಸಿಗಳನ್ನು ಅಮಾನತುಗೊಳಿಸಲಾಗಿದೆ.
ನಿನ್ನೆ ಬಿಜೆಪಿ ಜನಾಶಿರ್ವಾದ ಯಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹೊಡೆದು ಕೇಂದ್ರ ಸಚಿವ ಖೂಬಾ ಅವರನ್ನು ಸ್ವಾಗತಿಸಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಯಾದಗಿರಿ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ವೀರೇಶ್, ಸಂತೋಷ್ ಹಾಗೂ ಮೆಹಬೂಬ್ ಎಂಬುವವರನ್ನು ಸಸ್ಪೆಂಡ್ ಮಾಡಿ ಯಾದಗಿರಿ ಎಸ್.ಪಿ.ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಪಿಎಸ್ ಐ ವಿರುದ್ಧವೂ ಕ್ರಮಕ್ಕೆ ಎಸ್ ಪಿ ಸೂಚಿಸಿದ್ದಾರೆ.
ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ