ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್, ಆರ್ಥಿಕ ಸಂಕಷ್ಟಗಳ ನಡುವೆ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ಕಿ, ಬೇಳೆ, ತರಕಾರಿ, ಹಣ್ಣು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಗಗನಮುಖಿಯಾಗಿದ್ದು, ಜನಸಾಮಾನ್ಯರು ಹೊತ್ತಿನ ಊಟಕ್ಕೂ ಪರದಾಡಬೇಕಾದ ದುಸ್ಥಿತಿಯಿದೆ ಎಂದು ಕಿಡಿಕಾರಿದ್ದಾರೆ.
ಡೀಸೆಲ್ ಲೀಟರ್ ಗೆ 94.22 ರೂಪಾಯಿ, ಪೆಟ್ರೋಲ್ ಲೀಟರ್ ಗೆ 104ರೂ ಗಡಿ ದಾಟಿದೆ. ಇನ್ನು ಮಕ್ಕಳನ್ನು ಶಾಲೆಗಳಿಗೆ ಸೇರಿಸಲು ಖಾಸಗಿ ಶಾಲೆಗಳ ಶುಲ್ಕ ಕೇಳಿದರೆ ಮಕ್ಕಳನ್ನು ಶಾಲೆಗೂ ಕಳುಹಿಸಲು ಸಾಧ್ಯವಾಗದ ಸ್ಥಿತಿ ಎದುರಾಗಿದೆ. ಕೊರೊನಾ ಸಂಕಷ್ಟದ ನಡುವೆ ದೇಶದಲ್ಲಿ ಪ್ರತಿದಿನ ದುಬಾರಿ ದುನಿಯಾ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಕಂಗಾಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ