Kannada NewsLatest

ಮೂರು ಮಹಾನಗರ ಪಾಲಿಕೆ ಚುನಾವಣೆ; ಮತದಾನ ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣಾ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಬೆಳಿಗ್ಗೆ 7 ಗಂಟೆಯಿಂದಲೇ ಮೂರು ಮಹಾನಗರ ಪಾಲಿಕೆಗಳಿಗೆ ಮತದಾನ ಆರಂಭವಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸಿ ಪಾಲಿಕೆಗಳ ಚುನಾವಣೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ ಚಲಾಯಿಸಿದರು.

Home add -Advt

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪಾಲಿಕೆ ಚುನಾವಣೆ ಪ್ರತಿಷ್ಠೆ ಪ್ರಶ್ನೆಯಾಗಿದ್ದು, ಇದೇ ಮೊದಲಬಾರಿಗೆ ಮೂರು ಪಾಲಿಕೆಗಳಲ್ಲಿ ವ್ಯಕ್ತಿಗಳ ಬದಲಿಗೆ ಪಕ್ಷಗಳ ಚಿಹ್ನೆಗಳ ಮೂಲಕ ಚುನಾವಣೆ ಎದುರಿಸಲಾಗುತ್ತಿದೆ. ಮಹಾನಗರ ಪಾಲಿಕೆಗಳಲ್ಲಿ ಯಾವ ಪಕ್ಷ ಗೆಲ್ಲಲಿದೆ ಕಾದು ನೋಡಬೇಕಿದೆ.
IFS ಪತಿ-IPS ಪತ್ನಿ ಜಗಳ; ಐಎಎಸ್ ಅಧಿಕಾರಿ ಕೊಲೆ ಹಿಂದೆ ಪತ್ನಿ ಕೈವಾಡ; ಚಾರಿತ್ರ್ಯವನ್ನೇ ಪ್ರಶ್ನಿಸಿದ ನಿತಿನ್

Related Articles

Back to top button