
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ 4000 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ ನ್ಯೂನತೆ ಸರಿಪಡಿಸುವುದು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ಬಲಪಡಿಸುವುದು ನನ್ನ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಕ್ಕೂ ಮೊದಲು ರಾಜ್ಯದಲ್ಲಿ 33 ಸಾವಿರ ಪೊಲೀಸ್ ಹುದ್ದೆಗಳು ಖಾಲಿ ಇದ್ದವು. ಅವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗಿದೆ. ಪ್ರಸ್ತುತ 4 ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತುಂಬಿಕೊಳ್ಳುವ ಕೆಲಸ ಪ್ರಗತಿಯಲ್ಲಿದೆ ಎಂದರು.
ಪ್ರಸ್ತುತ ಪೊಲೀಸ್ ಇಲಾಖೆಯು 402 ಮತ್ತು 545 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಸುತ್ತಿದೆ. ಅಕ್ಟೋಬರ್ 3 ರಂದು 545 ಎಸ್‌ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.
ಅತಿಥಿ ಉಪನ್ಯಾಸಕರಿಗೆ ರೇಷನ್ ಕಿಟ್ ವಿತರಣೆ
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಇಂದಿನ ಚಿನ್ನ-ಬೆಳ್ಳಿ ದರದ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ