ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಸಾಧುನವರ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಕಾಂಗ್ರೆಸ್ ಕಚೇರಿಯಿಂದ ಬೃಹತ್ ರ್ಯಾಲಿ ಮೂಲಕ ಚನ್ನಮ್ಮ ವೃತ್ತದ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿ ಬಳಿಕ ಚುನಾವಣಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಅರಣ್ಯ ಸಚಿವ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಅಂಜಲಿ ನಿಂಬಾಳಕರ್, ಶಾಸಕ ಮಹಾಂತೇಶ ಕೌಜಲಗಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಮಾಜಿ ಶಾಸಕರಾದ ಫಿರೋಜ್ ಸೇಠ್, ಅಶೋಕ ಪಟ್ಟಣ, ಡಿ.ಬಿ. ಇನಾಮಾದಾರ, ಜಿಪಂ ಸದಸ್ಯ ಶಂಕರ ಮಾಡಲಗಿ, ಕಾಂಗ್ರೆಸ್ ಮುಖಂಡರಾದ ವಿನಯ ನಾವಲಗಟ್ಟಿ, ರಾಜು ಸೇಠ್ ಮೊದಲಾದ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು.
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಬಿಜೆಪಿ ವಶದಲ್ಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಕಾಂಗ್ರೆಸ್ ವಶಕ್ಕೆ ಪಡೆಯುವುದು ಶತಸಿದ್ಧ. ಚಿಕ್ಕೋಡಿ ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರು ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಬಗ್ಗೆ ತೋರಿಸುವ ಪ್ರೀತಿ. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಅಂತಕುಮಾರ ಅವರ ಪತ್ನಿ ತೇಜಶ್ವಿನಿ ಅವರ ಮೇಲೆ ಏಕೆ ಇಲ್ಲ ಎಂದು ಬಿಜೆಪಿ ನಾಯಕರು ಉತ್ತರಿಸಲಿ ಎಂದು ಪ್ರಶ್ನಿಸಿದರು.
ರಮೇಶ ಕತ್ತಿ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ