ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರಕ್ಕಾಗಿ ಎಂಐಎಂಐಎಂ ಪಕ್ಷದ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಪ್ರಚಾರದ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಪಾಲಿಸಿಲ್ಲ ಎನ್ನುವ ಕಾರಣದಿಂದ ಸುಮಾರು 300 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಲತೀಫ್ ಖಾನ್ ಪಠಾಣ್, ಝೋಯಾ ಡೋಣಿ, ಮುಸ್ತಾಕ್ ಅಹ್ಮದ್ ಶಫಿ ತಹಸಿಲ್ದಾರ್ ಸೇರಿದಂತೆ 300 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಕೊರೋನಾ ನಿಯಮ ಉಲ್ಲಂಘಿಸಲಾಗಿದೆ ಮತ್ತು ಚುನಾವಣೆ ಆಯೋಗ ವಿಧಿಸಿದ ಷರತ್ತುಗಳನ್ನು ಪಾಲಿಸಲಾಗಿಲ್ಲ ಎನ್ನುವ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ಇದೀಗ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. 2ನೇ ಜೆಎಂಎಫ್ ಸಿ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಎಂದು ಲತೀಫ್ ಖಾನ್ ಪಠಾಣ್ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಬೆಳಗಾವಿ ಪಾಲಿಕೆ: ಪಕ್ಷೇತರರದ್ದೇ ಮೇಲುಗೈ, ಏನಾಗಲಿದೆ ಎಂಇಎಸ್ (ಕು)ತಂತ್ರ ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ