ಪ್ರಗತಿವಾಹಿನಿ ಸುದ್ದಿ; ಮೈಸೂರು: 5 ರೂಪಾಯಿ ನಾಣ್ಯ ನುಂಗಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿ ನಾಲ್ಕು ವರ್ಷದ ಖುಷಿ ಎಂದು ಗುರುತಿಸಲಾಗಿದೆ. ಹರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ 5 ರೂಪಾಯಿ ನಾಣ್ಯ ನುಂಗಿದ್ದಳು.
ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯ ಹಿನ್ನೆಲೆಯಲ್ಲಿ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ.
ಬೆಳಗಾವಿ ಮಹಾನಗರ ಪಾಲಿಕೆ ಫಲಿತಾಂಶ -ಕ್ಷಣ ಕ್ಷಣಕ್ಕೂ Update
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ