Latest

ನಿರ್ಭಯಾ ಪ್ರಕರಣ ನೆನಪಿಸಿದ ಮತ್ತೊಂದು ಘಟನೆ; ಚಿಕಿತ್ಸೆ ಫಲಿಸದೇ ಅತ್ಯಾಚಾರ ಸಂತ್ರಸ್ತೆ ಸಾವು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮುಂಬೈನ ಸಾಕಿನಾಕಾದಲ್ಲಿ ಟೆಂಪೋದಲ್ಲಿ ಮಹಿಳೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸಾಕಿನಾಕಾ ಪ್ರದೇಶದಲ್ಲಿ ಕಾಮುಕರು ಟೆಂಪೊದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತುರುಕಿ, ಚಿತ್ರ ಹಿಂಸೆ ನೀಡಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿ ತಲುಪಿದ್ದ ಮಹಿಳೆಯನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು.

33 ಗಂಟೆಗಳ ಕಾಲ ಜೀವನ್ಮರಣದ ನಡುವೆ ಹೋರಾಡಿ ಸಂತ್ರಸ್ತೆ ಸಾವನ್ನಪ್ಪಿದ್ದಾರೆ. ತೀವ್ರ ರಕ್ತಸ್ರಾವ, ಅಂಗಾಂಗ ಗಾಯಗೊಂಡಿದ್ದರಿಂದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ದೆಹಲಿಯ ನಿರ್ಭಯಾ ಪ್ರಕರಣವನ್ನೇ ನೆನಪಿಸುವಂತಹ ಘಟನೆ ಇದಾಗಿದೆ.
ಅತ್ಯಾಚಾರ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಾಕಿನಾಕಾ ಠಾಣೆ ಪೊಲೀಸರು 45 ವರ್ಷದ ಆರೋಪಿ ಮೋಹನ್ ಚೌಹಾಣ್ ಎಂಬಾತನನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷಣ್ 307, 376, 504ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತನಿಖೆ ಚುರುಕುಗೊಳಿಸಿದ್ದಾರೆ.

Home add -Advt

ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ

Related Articles

Back to top button