
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಲಬುರ್ಗಿ ಪಾಲಿಕೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಅಂತಿಮ ನಿರ್ಧಾರ ಹೊರಬೀಳಲಿದೆ. ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ದಳಪತಿಗಳು ಮೈತ್ರು ನಿರ್ಧಾರ ಪ್ರಕಟಿಸಲಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕಾ ಅಥವಾ ಕಾಂಗ್ರೆಸ್ ಬೆಂಬಲಿಸಬೇಕಾ? ಎನ್ನುವ ಬಗ್ಗೆ ಕುಮಾರಸ್ವಾಮಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ರಾಜಕೀಯ ಲೆಕ್ಕಾಚಾರದ ಪ್ರಕಾರ ಹೆಚ್ ಡಿ ದೇವೇಗೌಡರು ಕಾಂಗ್ರೆಸ್ ಜೊತೆ ಮೈತ್ರಿಗೆ ಒಲವು ತೋರಿದ್ದಾರೆ. ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಮೈತ್ರಿ ನಿರ್ಧಾರ ಮಾಡಲು ದೇವೇಗೌಡರು ಸಲಹೆ ನೀಡಿದ್ದಾರೆ. ಆದರೆ ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಒಟ್ಟಾರೆ ನಾಳೆ ನಡೆಯಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೈತ್ರಿ ವಿಚಾರ ಅಂತಿಮವಾಗಲಿದೆ.
ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಗೆಜೆಟ್ ಆದೇಶದಂತೆ ಚುನಾವಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ