ಪ್ರಗತಿವಾಹಿನಿ ಸುದ್ದಿ; ಧಾರವಾಡ: ಜೆಡಿಎಸ್ ಮುಖಂಡನೋರ್ವ ನಡುಬೀದಿಯಲ್ಲಿಯೇ ಮಹಿಳೆಯ ಕೈಹಿಡಿದು ಎಳೆದಾಡಿರುವ ಘಟನೆ ಧಾರವಾಡ ಜಿಲ್ಲೆ ಸತ್ತೂರ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.
ಜೆಡಿಎಸ್ ನಾಯಕ ಶ್ರೀಕಾಂತ ಜಮನಾಳ ಮಹಿಳೆಯ ಕೈಹಿಡಿದು ಎಳೆದಾಡಿದ ವ್ಯಕ್ತಿ. ಯಾವ ಕಾರಣಕ್ಕೆ ಮಹಿಳೆ ಕೈ ಹಿಡಿದು ಎಳೆದಾಡಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ.
ಸತ್ತೂರು ನಿವಾಸಿಯಾಗಿರುವ ಮಹಿಳೆ ಮನೆಗೆ ಹೋಗುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಶ್ರೀಕಾಂತ ಜಮನಾಳ, ಮಹಿಳೆ ಕೈ ಹಿಡಿದು ಎಳೆದಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆ ಬಗ್ಗೆ ವಿದ್ಯಾಗಿರಿ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಪಾಲಿಕೆ ಮೈತ್ರಿ ವಿಚಾರ; ನಾಳೆ ನಿರ್ಧಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ