Latest

ಅಕ್ಟೋಬರ್ ನಲ್ಲಿ ರಾಜ್ಯಕ್ಕೆ ಅಪ್ಪಳಿಸಲಿದೆ ಕೊರೊನಾ 3ನೇ ಅಲೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗುತ್ತಿದ್ದರೂ ಮೂರನೇ ಅಲೆ ಆತಂಕ ಎದುರಾಗಿದೆ. ಅಕ್ಟೋಬರ್ ನಲ್ಲಿ ಮೂರನೇ ಅಲೆ ರಾಜ್ಯಕ್ಕೆ ಅಪ್ಪಳಿಸಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ.

ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

ಸಾಲು ಸಾಲು ಹಬ್ಬಗಳ ನಡುವೆ ಜನರು ಕೋವಿಡ್ ನಿಯಮಗಳನ್ನು ಮರೆತು ಆಚರಣೆಯಲ್ಲಿ ತೊಡಗಿದ್ದಾರೆ. ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿದೆ. ಮಾಸ್ಕ್, ದೈಹಿಕ, ಸಾಮಾಜಿಕ ಅಂತರವಂತು ಮರೆತು ಹೋಗಿದೆ. ಒಂದೆಡೆ ಮಳೆಯ ಅಬ್ಬರದ ನಡುವೆ ಸೋಂಕಿತರ ಸಂಖ್ಯೆ ಹೆಚ್ಚಲು ಜನರ ನಿರ್ಲಕ್ಷ ಕೂಡ ಕಾರಣವಾಗಬಹುದು. ಕೊರೊನಾ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದ್ದು, ಈಗಲೇ ಸರ್ಕಾರ ಎಚ್ಚೆತ್ತುಕೊಂಡು ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಸೂಚಿಸಿದೆ.
ಹಿಂದೂ ಸಂಘಟನೆಗಳ ವಿರೋಧ; ಸಂಸದ ಪ್ರತಾಪ್ ಸಿಂಹ ಆಕ್ರೋಶ -101 ಗಣಪತಿ ದೇವಾಲಯಗಳ ತೆರವು?-

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button