Latest

ಅಪ್ರಾಪ್ತೆ ಮೇಲೆ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತಿದ್ದು, ಇದೀಗ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕರು ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘೋರ ಘಟನೆ ಚಿಕ್ಕಮಗಳೂರಿನ ಸಖರಾಯಪಟ್ಟಣದಲ್ಲಿ ನಡೆದಿದೆ.

ಬಾಲಕಿ ಬಟ್ಟೆ ಬದಲಿಸುವಾಗ ವಿಡಿಯೋ ಚಿತ್ರೀಕರಣ ಮಾಡಿ ಆಕೆಯನ್ನು ಹೆದರಿಸಿ ನೀಚ ಕೃತ್ಯವೆಸಗಿದ್ದಾರೆ. ಕರೆದಾಗ ಬರಬೇಕು ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಹೇಳಿ ಬೆದರಿಕೆಯೊಡ್ಡಿ, ಕಳೆದ ಎರಡು ತಿಂಗಳಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಾರೆ.

ಆರೋಪಿಗಳ ಹೀನ ಕೃತ್ಯಕ್ಕೆ ಅದೇ ಗ್ರಾಮದ ಮತ್ತೋರ್ವ ಬೆಂಬಲಿಸಿದ್ದ. ಸಖರಾಯಪಟ್ಟಣ ಠಾಣೆಯಲ್ಲಿ ಬಾಲಕಿ ದೂರು ದಾಖಲಿಸಿದ್ದು, ಇದೀಗ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರೆದಿದೆ.

Home add -Advt

Related Articles

Back to top button