ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಇಂಧನ ಸಚಿವರಾಗಿದ್ದ ವೇಳೆ ಮಾತಿನಚಕಮಕಿ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದಕ್ಷಿಣ ಕನ್ನಡ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಡಿ.ಕೆ.ಶಿವಕುಮಾರ್ ಅವರನ್ನು ಸೆ.29ರಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಡಿಜಿ ಹಾಗೂ ಐಜಿಪಿಗೆ ನೋಟೀಸ್ ನೀಡಿದೆ.
ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ 2016ರಲ್ಲಿ ವಿದ್ಯುತ್ ಸಮಸ್ಯೆ ಕುರಿತಾಗಿ ಬೆಳ್ಳಾರೆಯ ವರ್ತಕರ ಸಂಘದ ಅಧ್ಯಕ್ಷ ಸಾಯಿ ಗಿರಿಧರ್ ರೈ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿ ದೂರಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಗಿರಿಧರ್ ನಡುವೆ ಮಾತಿನಚಕಮಕಿ ನಡೆದು, ಅವಾಚ್ಯ ಶಬ್ಧಗಳಿಂದ ನಂದನೆಯೂ ನಡೆದಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಗಿರಿಧರ್ ರೈ ಅವರನ್ನು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣ ಸಂಬಂಧ ಸಾಕ್ಷ್ಯ ಹೇಳಲು ಡಿ.ಕೆ.ಶಿವಕುಮಾರ್ ಕೋರ್ಟ್ ಹೆ ಹಾಜರಾಗಿರಲಿಲ್ಲ. ಹಲವುಬಾರಿ ನೋಟೀಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಇದೀಗ ಸುಳ್ಯ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಅವರಿಗೆ ವಾರಂಟ್ ಜಾರಿ ಮಾಡಿದೆ.
ಭಾರಿ ಮಳೆ; ಬೆಳಗಾವಿಯಲ್ಲಿ ಮತ್ತೆ ಪ್ರವಾಹ ಭೀತಿ; ಹಲವು ಸೇತುವೆಗಳು ಮುಳುಗಡೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ