ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಚಾಲರಾಜನಗರ ಜಿಲ್ಲಾ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದ್ದು, 20 ವರ್ಷ ಜೈಲುಶಿಕ್ಷೆ ಪ್ರಕಟಿಸಿದೆ.
2018ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣ ಸಂಬಂಧ ಅಪರಾಧಿ ಚಂದ್ರು ಅಲಿಯಾಸ್ ಚಂದ್ರಶೇಖರ್ ಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿದೆ.
ಅಲ್ಲದೇ ಅಪರಾಧಿ ಚಂದ್ರುಗೆ ಆಶ್ರಯ ನೀಡಿದ್ದ ಮಹಿಳೆ ಮಹದೇವಮ್ಮಗೂ 5 ವರ್ಷ ಕಠಿಣ ಕಾರಾಗ್ರಹ ಶಿಕ್ಷೆ ಹಾಗೂ 2 ಲಕ್ಷ ದಂಡ ವಿಧಿಸಿ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಬಾಲಕಿಯನ್ನು ಅಪಹರಿಸಿದ್ದ ಚಂದ್ರು ಮನೆಯೊಂದರಲ್ಲಿ ಬಾಲಕಿಯನ್ನು ಕೂಡಿಟ್ಟು ಲೈಂಗಿಕ ದೌರ್ಜನ್ಯವೆಸಗಿದ್ದ. ಇದಕ್ಕೆ ಮಹಿಳೆ ಕೂಡ ಸಾಥ್ ನೀಡಿದ್ದಳು. ಬಾಲಕಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಬೆಳಕಿಗೆ ಬಂದಿತ್ತು.
ಫ್ಲೈಓವರ್ ಮೇಲಿಂದ ಹಾರಿ ಬಿದ್ದು ಯುವಕ-ಯುವತಿ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ