ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ, ವೇದಗಂಗಾ, ದೂಧ್ ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕೊಯ್ನಾ ಜಲಾಶಯ ಭರ್ತಿಯಾಗಿದ್ದು, ಕೃಷ್ಣಾ ನದಿಗೆ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಜಿಲ್ಲೆಯ 8 ಗ್ರಾಮಗಳು ಜಲಾವೃತಗೊಂಡಿವೆ. ಭಾರಿ ಮಳೆಯಿಂದಾಗಿ ಕೃಷ್ಣಾ ನದಿಯಿಂದ ಒಂದುವರೆ ಲಕ್ಷ ಕ್ಯೂಸೆಕ್ ನೀರು ಹೊರ ಹೋಗುತ್ತಿದೆ.
ಬಾರವಾಡ, ಕುಣ್ಣೂರು, ಬೋಜ, ಕಾರದಗಾ, ಮಲ್ಲಿಕವಾಡ, ದತ್ತವಾಡ ಸೇತುವೆಗಳು ಮುಳುಗಡೆಯಾಗಿದ್ದು, ಕೃಷ್ಣಾ ನದಿ ನೀರಿನಿಂದಾಗಿ ಕಲ್ಲೋಳ ಹೊರ ವಲಯದ ದತ್ತ ಮಂದಿರಕ್ಕೆ ಜಲದಿಗ್ಬಂಧನವುಂಟಾಗಿದೆ. ದೇವಾಲಯದ ಸುತ್ತಮುತ್ತ ಜಲಾವೃತಗೊಂಡಿದ್ದು, ದೇವಾಲಯ ನಡುಗಡ್ಡೆಯಂತಾಗಿದೆ.
ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಆತಂಕ ಎದುರಾಗಿದೆ.
ಕಬ್ಬಿನ ಗದ್ದೆಗೆ ಬೆಂಕಿ; ಸಾವಿರಾರು ಟನ್ ಕಬ್ಬು ಸಂಪೂರ್ಣ ಬೆಂಕಿಗಾಹುತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ