ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾಸಗಿ ಶಾಲೆಗಳ ಬೋಧನಾ ಶುಲ್ಕ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿರುವ ಹೈಕೋರ್ಟ್ ಶೇ.15ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿದೆ.
ಕೊರೊನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಬೋಧನಾ ಶುಲ್ಕವನ್ನು ಶೇ.30ರಷ್ಟು ಕಡಿತ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿದ್ದವು.
ಇದೀಗ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಹೈಕೋರ್ಟ್ ಮತ್ತೊಂದು ಆದೇಶ ಹೊರಡಿಸಿದ್ದು, 2020-21ರ ಸಾಲಿಗೆ ಶೇ.15ರಷ್ಟು ಶುಲ್ಕ ರಿಯಾಯಿತಿ ನೀಡುವತೆ ಆದೇಶ ನೀಡಿದೆ. ಇದರಿಂದ ಶಿಕ್ಷಣ ಸಂಸ್ಥೆಗಳಿಗೆ ರಿಲೀಫ್ ಸಿಕ್ಕಂತಾಗಿದೆ.
ಕೊರೊನಾ 3ನೇ ಅಲೆ: ಮಕ್ಕಳಲ್ಲಿ 7 ಪಟ್ಟು ಸೋಂಕು ಹೆಚ್ಚಳದ ಎಚ್ಚರಿಕೆ ನೀಡಿದ IISC
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ