
ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಎರಡನೇ ಬಾರಿ ಸಮನ್ಸ್ ಜಾರಿ ಮಾಡಿದೆ.
ಸೆಪ್ಟೆಂಬರ್ 25ರೊಳಗೆ ಹೇಳಿಕೆ ದಾಖಲಿಸುವಂತೆ ಸಮನ್ಸ್ ನಲ್ಲಿ ಇಡಿ ಸೂಚಿಸಿದೆ. ಕೆಲ ದಿನಗಳ ಹಿಂದೆ ದೆಹಲಿಯ ಇಡಿ ಕಚೇರಿಗೆ ಹಾಜರಾಗಿದ್ದ ಜಾಕ್ವೆಲಿನ್, ಸತತ 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು.
ಇದೀಗ ಮತ್ತೆ ಸಮನ್ಸ್ ಜಾರಿ ಮಾಡಿರುವ ಇಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸುಕೇಶ್ ಚಂದ್ರಶೇಖರ್ ಎಂಬಾತನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಸಾಕ್ಷ್ಯ ಎಂಬ ರೀತಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್; ರಾಜಕೀಯಕ್ಕೆ ಎಂಟ್ರಿ?