ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬುಧವಾರ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಗಳೂರಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಪಾಲ್ಗೊಂಡಿರುವುದರಿಂದ ಸ್ಥಳೀಯ ಜನಪ್ರತಿನಿಧಿಗಳು ಕಾಮಗಾರಿಗಳಿಗೆ ಚಾಲನೆ ನೀಡಿದರು.
ಕ್ಷೇತ್ರದ ಕುದ್ರೆಮನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ ಲೋಕೋಪಯೋಗಿ ಇಲಾಖೆಯ 11 ಲಕ್ಷ ರೂ ಅನುದಾನದಲ್ಲಿ ನೂತನ ಕೊಠಡಿಯ ಕಟ್ಟಡದ ಕಾಮಗಾರಿಗೆ ಸ್ಥಳೀಯ ಪ್ರತಿನಿಧಿಗಳು ಹಾಗೂ ಯುವಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ತಾಲೂಕು ಪಂಚಾಯತ್ ಸದಸ್ಯೆ ಶುಭಾಂಗಿ ರಾಜಗೊಳ್ಕರ್, ಶಂಕರ ಪಾಟೀಲ, ಅರುಣ ದೇವನ್, ದೀಪಕ್ ಪಾಟೀಲ, ವೈಜು ರಾಜಗೊಳ್ಕರ್ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ರಸ್ತೆ ಡಾಂಬರಿಕರಣ
ಮಳೆ - ಪ್ರವಾಹದಿಂದ ಹದಗೆಟ್ಟ ಮಂಡೋಳ್ಳಿ - ಸಾವಗಾಂವ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರೀಕರಣ ಹಾಗೂ ಎರಡೂ ಬದಿಗೆ ಕಾಲುವೆಗಳ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆಯನ್ನು ನೆರವೇರಿಸಿ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದಹಿರಿಯರು, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಗುತ್ತಿಗೆದಾರರಾದ ರಾಚಣ್ಣವರ್ ಮುಂತಾದವರು ಉಪಸ್ಥಿತರಿದ್ದರು.
ಜಲಜೀವನ್ ಮಿಷನ್ ಕಾಮಗಾರಿ
ಬಿ.ಕೆ.ಕಣಗಾಂವ್ ಗ್ರಾಮದಲ್ಲಿ 36 ಲಕ್ಷ ರೂ. ಮೊತ್ತದ ಜಲಜೀವನ್ ಮಿಷನ್ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮೃಣಾಲ ಹೆಬ್ಬಾಳಕರ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು, ಊರಿನ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ