ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರತ್ಯೇಕ ಸೆಲ್ ಕಲಬುರ್ಗಿಯಲ್ಲಿ ಆರಂಭಿಸಲಾಗುವುದು. ಸ್ವಲ್ಪ ಸಮಯ ಕೊಡಿ ಕಲ್ಯಾಣ ಕರ್ನಾಟಕ ಅಮುಲಾಗ್ರ ಬದಲಾವಣೆ ತರುವ ಕೆಲಸ ನಾನು ಮಾಡುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
74ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕಲಬುರ್ಗಿಯ ಡಿ.ಆರ್.ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ಸರ್ದಾರ ವಲ್ಲಭಭಾಯ್ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪನೆ ಮಾಡಿದರು. ಬಳಿಕ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗದಿದ್ದರೆ, ಸಮಗ್ರ ಕರ್ನಾಟಕದ ಅಭಿವೃದ್ಧಿಯಾಗಲ್ಲ. ಸರ್ಕಾರದ ಯೋಜನೆಗಳು ಕಟ್ಟಕಡೇಯ ವ್ಯಕ್ತಿಗೂ ತಲುಪಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.
ಕೆಕೆಆರ್ ಡಿಬಿಗೆ ಪ್ರತ್ಯೇಕ ಸೆಲ್ ಸ್ಥಾಪಿಸಿ, ಖಾಯಂ ಕಾರ್ಯದರ್ಶಿ ನೇಮಕ ಮಾಡಲಾಗುವುದು. ಕೆಕೆಆರ್ ಡಿಬಿಗೆ ನೀಡಿದ ಹಣ ಖರ್ಚು ತೋರಿಸಿದರೆ ಮತ್ತೆ 1500 ಕೋಟಿ ನೀಡಲು ಸಿದ್ಧ. ಕಲ್ಯಾಣ ಕರ್ನಾಟಕ ಭಾಗಕ್ಕೆ ಒಟ್ಟು 3000 ಕೋಟಿ ಹಣ ಬಿಡುಗಡೆ ಮಾಡಲಾಗುವುದು. ಜನರ ಸುತ್ತ ಅಭಿವೃದ್ಧಿಯಾಗಬೇಕು ಹೊರತು ಅಭಿವೃದ್ಧಿ ಸುತ್ತ ಜನ ಓಡಾಡಬಾರದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ ನಿರಾಣಿ, ಮುನಿರತ್ನ, ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ್ ರೇವೂರ್, ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ್, ಎಂ ವೈ ಪಾಟೀಲ್, ಬಸವರಾಜ ಮತ್ತಿಮೂಡ, ಸಂಸದ ಉಮೇಶ ಜಾಧವ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಂಜನೇಯ ವಜ್ಜಲ್ ವಿರುದ್ಧ ಎಫ್ಐಆರ್ ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ