ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತನಿಖಾ ವರದಿಗೆ ಸಂತ್ರಸ್ತ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ನಡೆದ ವಿಚಾರಣೆ ವೇಳೆ ಎಜಿ ಪ್ರಭುಲಿಂಗ ನಾವದಗಿ ಎಸ್ ಐಟಿ ಅಂತಿಮ ತನಿಖಾ ವರದಿ ಸಲ್ಲಿಸಲು ಅನುಮತಿ ನೀಡುವಂತೆ ಕೋರಿದರು. ಎಜಿ ಮನವಿಗೆ ಯುವತಿ ಪರ ವಕೀಲೆ ಆಕ್ಷೇಪಣೆ ವ್ಯಕ್ತಪಡಿಸಿದರು. ಎಸ್ ಐಟಿ ತನಿಖಾ ವರದಿ ಈಗಾಗಲೇ ಸೋರಿಕೆಯಾಗಿದೆ. ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದಂತಿದೆ. ಈ ಬಗ್ಗೆ ಮರು ತನಿಖೆಯಾಗಬೇಕು ಎಂದು ವಾದ ಮಂಡಿಸಿದರು.
ಇದೇ ವೇಳೆ ತನಿಖಾ ವರದಿ ಸೋರಿಕೆ ಬಗ್ಗೆಯೂ ತನಿಖೆಯಾಗಲಿ. ಪ್ರಕರಣದಲ್ಲಿ ಎಸ್ ಐಟಿ ತನಿಖೆ ರದ್ದು ಪಡಿಸಲು ಈ ಹಿಂದೆಯೇ ಮನವಿ ಮಾಡಿದ್ದೇವೆ ಎಂದು ವಾದ ಮಂಡಿಸಿದ್ದಾರೆ.
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ಸೆ.27ಕ್ಕೆ ನಿಗದಿ ಪಡಿಸಿದೆ. ಅಂತಿಮ ವರದಿ ಸಲ್ಲಿಸಲು ಅನುಮತಿ ನೀಡಬೇಕೇ? ಬೇಡವೇ ಎಂಬ ಬಗ್ಗೆ ನ್ಯಾಯಾಲಯ ಅಂದು ವಿಚಾರಣೆ ನಡೆಸಲಿದೆ.
ವಿಜಯೇಂದ್ರ ಸ್ಪರ್ಧೆ ವಿಚಾರ; ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ