Latest

ರಾಜ್ಯಸಭೆಗೆ ಭಾಸ್ಕರ್ ರಾವ್ ಸ್ಪರ್ಧೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದ ಭಾಸ್ಕರ್ ರಾವ್ ತಮ್ಮ ಸೇವೆಗೆ ಏಕಾಏಕಿ ರಾಜೀನಾಮೆ ಸಲ್ಲಿಸಿ ಇದೀಗ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ನಿನ್ನೆ ವೈಯಕ್ತಿಕ ಕಾರಣಕ್ಕೆ ಸ್ವಯಂ ನಿವೃತ್ತಿ ಪಡೆಯುವುದಾಗಿ ಹೇಳಿ ಡಿಜಿ ಹಾಗೂ ಐಜಿಪಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಅವರ ರಾಜೀನಾಮೆ ಅಂಗೀಕಾರವಾಗಿತ್ತು.

ಭಾಸ್ಕರ್ ರಾವ್ ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದೀಗ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ನಿಧನರಾಗಿರುವ ಆಸ್ಕರ್ ಫರ್ನಾಂಡಿಸ್ ಅವರಿಂದ ತೆರವಾಗಿರುವ ಸ್ಥಾನದ ಮೇಲೆ ಭಾಸ್ಕರ್ ರಾವ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಸಧ್ಯದಲ್ಲೇ ಒಂದು ರಾಜ್ಯಸಭಾ ಸ್ಥಾನದ ಉಪ ಚುನಾವಣೆ ನಡೆಯಲಿದ್ದು, ಈ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್; ರಾಜಕೀಯಕ್ಕೆ ಎಂಟ್ರಿ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button