Latest

ಹೆರಿಗೆ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಹಸುಗೂಸುಗಳನ್ನು ಎತ್ತಿಕೊಂಡು ಹೊರಗೋಡಿ ಪ್ರಾಣ ಉಳಿಸಿಕೊಂಡ ಮಹಿಳೆಯರು

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಾವೇರಿ ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬಾಣಂತಿಯರು ಹಸುಗೂಸುಗಳನ್ನು ಕರೆದುಕೊಂಡು ಆಸ್ಪತ್ರೆಯಿಂದ ಹೊರಗೋಡಿಬಂದ ಘಟನೆ ನಡೆದಿದೆ.

ಇಂದು ಮುಂಜಾನೆ ಈ ಅವ್ಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ.

ಬೆಂಕಿ ಅವಘಡದಿಂದಾಗಿ ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲದೇ ಬಾಣಂತಿಯರು ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಮುಭಾಗ ಕಾಲಕಳೆಯುತ್ತಿದ್ದರೆ, ನೂರಾರು ಗರ್ಭಿಣಿಯರು ಪರದಾಡುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button