Latest

ಲಾಡ್ಜ್ ಸುರಂಗ ಮಾರ್ಗದಲ್ಲಿ ಹೈಟೆಕ್ ವೇಶ್ಯಾವಾಟಿಕೆ; ದಾಳಿ ವೇಳೆ ಶಾಕ್ ಆದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ತುಮಕೂರು: ಲಾಡ್ಜ್ ಒಂದರ ಸುರಂಗದಲ್ಲಿ ಅಡಗಿ ಕುಳಿತು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ತುಮಕೂರಿನ ಕ್ಯಾತ್ಸಂದ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ರಾಶಿ ರಾಶಿ ಕಾಂಡೋಮ್ ಗಳು ಬಿದ್ದಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಖಚಿತ ಮಾಹಿತಿ ಆಧಾರದ ಮೇಲೆ ತುಮಕೂರಿನ ಕ್ಯಾತ್ಸಂದ್ರದ ಲಾಡ್ಜ್ ಒಂದರ ಮೇಲೆ ಪೊಲೀಸರೊಂದಿಗೆ ದಾಳಿ ನಡೆಸಿದ್ದು, ಲಾಡ್ಜ್ ನಲ್ಲೇ ಸುರಂಗ ಕೊರೆದು ದಂಧೆ ನಡೆಸುತ್ತಿರುವುದು ಬಯಲಾಗಿದೆ.

ಲಾಡ್ಜ್ ನ ರೂಮ್ ಒಂದರ ಬೃಹತ್ ಕನ್ನಡಿ ಕೆಳಭಾಗದಲ್ಲಿ ಸ್ಟ್ಯಾಂಡ್ ಮಾದರಿಯಲ್ಲಿ ಸುರಂಗ ಪತ್ತೆಯಾಗಿದೆ. ಈ ಸ್ಟ್ಯಾಂಡ್ ಬಾಗಿಲು ಒಡೆದಾಗ ಅದರಲ್ಲಿ ಇಬ್ಬರು ಯುವತಿಯರು ಹಾಗೂ ಓರ್ವ ಪುರುಷ ಅಡಗಿ ಕುಳಿತಿರುವುದು ಗೊತ್ತಾಗಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ದಾಳಿ ನಡೆಸುವ ಸುಳಿವು ಗೊತ್ತಾಗುತ್ತಿದ್ದಂತೆ ಲಾಡ್ಜ್ ನ ಸುರಂಗದಲ್ಲಿ ಯುವತಿಯರನ್ನು ಬಚ್ಚಿಡಲಾಗುತ್ತಿತ್ತು ಎನಲಾಗಿದೆ. ಈ ಭಾರಿ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹೈಟೆಕ್ ವೇಶ್ಯಾವಾಟಿಕೆಗೆ ಸಂಬಂಧಿಸಿದಂತೆ ಇಬ್ಬರು ಯುವತಿಯರು ಸೇರಿದಂತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು-ಚೆನ್ನೈ ಎಕ್ಸ್ ಪ್ರೆಸ್ ರೈಲು ಭೀಕರ ಅಪಘಾತ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button