Latest

ಮತ್ತೊಂದು ಘೋರ ದುರಂತ; ನಿಗೂಢ ಸ್ಫೋಟಕ್ಕೆ ಛಿದ್ರ ಛಿದ್ರಗೊಂಡ ಮೂವರ ದೇಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು,  ಸ್ಫೋಟಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆ ರಾಯನ್ ಸರ್ಕಲ್ ಬಳಿ ನಡೆದಿದೆ.

ಎರಡು ದಿನಗಳ ಹಿಂದಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು  ಅನಾಹುತ ಸಂಭವಿಸಿದ್ದು, ಮನೆಯೊಂದರಲ್ಲಿ  ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದಾರೆ. ಸ್ಫೋಟದ ರಭಸಕ್ಕೆ ಮೂವರ ದೇಹ ಛಿದ್ರ ಛಿದ್ರಗೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದ್ದಾರೆ.

ಸ್ಫೋಟ ಹೇಗೆ ಮತ್ತು ಯಾವುದರಿಂದ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

ಮಗುವನ್ನು ಶಾಲೆಗೆ ಸೇರಿಸಿಕೊಳ್ಳಲು ಮಸಾಜ್ ಲಂಚ: ಶಿಕ್ಷಕ ಅಮಾನತು

Related Articles

Back to top button