Latest

ಜೈಲಿನಲ್ಲೇ ಆರೋಪಿಗಳನ್ನು ಗುರುತಿಸಿದ ಗ್ಯಾಂಗ್ ರೇಪ್ ಸಂತ್ರಸ್ತೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಬಂಧಿತ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದಾರೆ.

ಪ್ರಕರಣ ಸಂಬಂಧ ಮೈಸೂರು ಪೊಲೀಸರು ತಮಿಳುನಾಡು ಮೂಲದ 6 ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಓರ್ವ ಬಾಲಾರೋಪಿಯಾಗಿದ್ದಾನೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತ 6 ಆರೋಪಿಗಳು ಜೈಲಿನಲ್ಲಿದ್ದು, ಇದೀಗ ಅಧಿಕಾರಿಗಳೊಂದಿಗೆ ಜೈಲಿಗೆ ಭೇಟಿ ನೀಡಿ ಸಂತ್ರಸ್ತ ಯುವತಿ ಆರೋಪಿಗಳನ್ನು ಗುರುತಿಸಿದ್ದಾರೆ.

Home add -Advt

ನಿನ್ನೆ ಮುಂಬೈನಿಂದ ಮೈಸೂರಿಗೆ ಆಗಮಿಸಿದ್ದ ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದರು. ಇದೀಗ ಜೈಲಿನಲ್ಲಿದ್ದ ಆರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್ 24ರಂದು ಸ್ನೇಹಿತನ ಜೊತೆಗೆ ತೆರಳಿದ್ದ ಎಂಬಿಎ ವಿದ್ಯಾರ್ಥಿನಿ ಮೇಲೆ ಕಾಮಾಂಧರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಕೃತ್ಯ ನಡೆದು 82 ಗಂಟೆಗಳ ಬಳಿಕ 6 ಆರೋಪಿಗಳನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದರು.

ನಿಗೂಢ ಸ್ಫೋಟಕ್ಕೆ ಮೂವರ ದುರ್ಮರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಶಾಸಕ ಜಮೀರ್

Related Articles

Back to top button