ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗದಗ ಜಿಲ್ಲೆಯ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಕಲ್ ಪ್ರದಾನ ಮಾಡಿದರು. ಪವಿತ್ರಾವರ ಜೀವನ, ಸೈಕ್ಲಿಂಗ್ ನಲ್ಲಿ ಅವರ ಸಾಧನೆ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಅಶೋಕ್ ಮತ್ತು ರೇಣುಕಾ ದಂಪತಿ ಮಗಳಾದ ಪವಿತ್ರಾ ಕುರ್ತಕೋಟಿ ಇವರು, 5 ನೇ ತರಗತಿಗೆ ಸೈಕ್ಲಿಂಗ್ ಕ್ರೀಡೆಯಲ್ಲಿ ಪ್ರವೇಶ ಪಡೆದು ಪ್ರಥಮ ಪಿಯುಸಿ ಗೆ ವಿಡಿಎಫ್ಟಿ ಬಾಲಕಿಯರ ಕಾಲೇಜಿನಲ್ಲಿ ಓದುತ್ತಿದ್ದಾರೆ.
ತಂದೆ ರೈತ ಕಾರ್ಮಿಕರಾಗಿದ್ದು, ತಾಯಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಸಹಾಯಕರಾಗಿದ್ದಾರೆ. ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಪವಿತ್ರ ಅವರಿಗೆ ಮೊದಲಿನಿಂದಲೂ ಸೈಕ್ತಿಂಗ್ನಲ್ಲಿ ಆಸಕ್ತಿ. ಆದರೆ ಗುಣಮಟ್ಟದ ಸೈಕಲ್ ಖರೀದಿಸುವ ಶಕ್ತಿ ಇಲ್ಲ. ದಾನಿಗಳ ಸಹಾಯದಿಂದ ಕು. ಪವಿತ್ರ ಅವರು ಸೈಕಲ್ ಖರೀದಿಸಿ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಗಳಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಖಾಸಗಿ ಸುದ್ದಿವಾಹಿನಿಯಲ್ಲಿ ಸ೦ದರ್ಶನದಲ್ಲಿದ್ದಾಗ ಪವಿತ್ರ ಅವರು
ದೂರವಾಣಿಯಲ್ಲಿ ಮಾತನಾಡಿ ಗುಣಮಟ್ಟದ ಸೈಕಲ್ ಕೊಡಿಸುವಂತೆ ಮನವಿ ಮಾಡಿದ್ದರು.
ಉತ್ತಮ ಗುಣಮಟ್ಟದ ಸೈಕಲ್ ಕೊಡಿಸುವುದಾಗಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕ್ರೀಡಾ ಇಲಾಖೆ ಹಾಗೂ ದಾನಿಗಳ ಸಹಕಾರದೊಂದಿಗೆ Aergon – 18 E119 ಸೈಕಲ್ ಅನ್ನು ಖರೀದಿಸಿ ಪವಿತ್ರ ಅವರಿಗೆ, ಮುಖ್ಯಮಂತ್ರಿಗಳ ಹಸ್ತದಿ೦ದಲೇ ಕೊಡಿಸಿದ್ದಾರೆ. ಆ ಮೂಲಕ ಪವಿತ್ರ ಕನಸು ನನಸುಗೊಳಿಸಿ ಅ೦ತರಾಷ್ಟೀಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪ್ರಯತ್ನಕ್ಕೆ ಸಹಕಾರ ನೀಡಿದ್ದಾರೆ.
ಪವಿತ್ರ ಅವರು ಸೈಕ್ಲಿಂಗ್ ಸ್ಪರ್ಧೆಯಲ್ಲಿ ಮಾಡಿದ ಸಾಧನೆ:
2018ರಲ್ಲಿ ಕುರುಕ್ಷೇತ್ರದಲ್ಲಿ ನಡೆದ ರೋಡ್ ಸೈಕ್ಲಿಂಗ್ 158.ಮಿ. ಸ್ಪರ್ಧೆಯಲ್ಲಿ 5ನೇ ಸ್ಥಾನ.
2019ರಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ ಎಂ.ಟಿ.ಬಿ. ಸೈಕಲ್ ಸ್ಪರ್ಧೆಯಲ್ಲಿ 9ನೇ ಸ್ಥಾನ.
2021ರಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಎಂ.ಟಿ.ಬಿ. ಮೌಂಟೇನ್ ಬೈಕ್ ಸ್ಪರ್ಧೆಯಲ್ಲಿ 3ನೇ ಸ್ಥಾನ.
2021ರಲ್ಲಿ ಗದಗದಲ್ಲಿ ನಡೆದ ರಾಷ್ಟ್ರೀಯ ಎಂ.ಟಿ.ಬಿ. ಮೌಂಟೇನ್ ಬೈಕ್ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.
ಈಗ ನ್ಯಾಶನಲ್ ಲೆವೆಲ್ ಗೇಮ್ಸ್ ಚಾಂಪಿಯನ್ ಶಿಪ್ಗೆ ಆಯ್ಕೆಯಾಗಿದ್ದಾರೆ. ಪಂಜಾಬ್ನ ಪಟಿಯಾಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಟೀಮ್ಗೆ ಆಯ್ಕೆಯಾಗಿದ್ದು, ಈ ಕ್ಯಾಂಪಿನಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ಮಟ್ಟದ ಸೈಕಲ್ ವಶ್ಯಕತೆ ಇತ್ತು. ಅದನ್ನು ಈಗ ಯುವ ಸಬಲೀಕರಣ ಸತ್ತು ಕ್ರೀಡಾ “ಇಲಾಖೆಯಿಂದ ನೀಡಲಾಗಿದೆ.
ಪವಿತ್ರಾ ಕುರ್ತಕೋಟಿಗೆ ಮುಖ್ಯಮಂತ್ರಿಗಳಿಂದ ಸೈಕಲ್ ಪ್ರದಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ