Latest

ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭಾ ಸ್ಪೀಕರ್ ಭಾಷಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಮಂಡಲ ಅಧಿವೇಶನದ ಕೊನೇ ದಿನ ಹಾಗೂ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕರ್ನಾಟಕ ಅಧಿವೇಶಕ್ಕೆ ಆಗಮಿಸಿದ್ದು, ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ್ದಾರೆ.

ವಿಧಾನಸಭೆಯಲ್ಲಿ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ, ಕರ್ನಾಟಕದ ವಿಧಾನಸಭೆ, ವಿಧಾನಪರಿಷತ್ ಸದಸ್ಯರನ್ನು ಭೇಟಿಯಾಗುತ್ತಿರುವುದು ಸಂತಸ ತಂದಿದೆ. ವಿಧಾನಸೌಧ ನಿರ್ಮಿಸಿದ ಕೆಂಗಲ್ ಹನುಮಂತಯ್ಯಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರನ್ನು ಸ್ಮರಿಸುತ್ತೇನೆ. ಬಸವಣ್ಣನವರ ಅನುಭವ ಮಂಟಪ ಪ್ರಜಾಪ್ರಭುತ್ವಕ್ಕೆ ಬುನಾದಿ ಎಂದರು.

ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ದಿನೇ ದಿನೇ ಸದೃಢವಾಗುತ್ತಿದೆ. ಜನಹಿತ, ಜನ ಕಲ್ಯಾಣಕ್ಕೆ ಜನಪ್ರತಿನಿಧಿಗಳು ಒತ್ತು ನೀಡಬೇಕು. ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಗೌರವ. ಜನಪರ ಸಮಸ್ಯೆಗಳ ಬಗ್ಗೆ ಸದನಗಳಲ್ಲಿ ಚರ್ಚೆಯಾಗಬೇಕು. ಜನರ ಸಾಮಾಜಿಕ, ಆರ್ಥಿಕ ಉನ್ನತಿಗೆ ಶ್ರಮಿಸಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಸದನದಲ್ಲಿ ಕಲಾಪ, ಚರ್ಚೆ ನಡೆಯದಿರುವುದು ಬೇಸರದ ವಿಚಾರ ಎಂದು ಹೇಳಿದರು.

ಇದೇ ವೇಳೆ ಎಂಟು ಬಾರಿ ಶಾಸಕರಾಗಿ, ಸಂಸದರಾಗಿ, ಪರಿಷತ್ ಸದಸ್ಯರಾಗಿ, 4 ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ನಾಡಿಗೆ ವಿಶೇಷ ಸೇವೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪನವರಿಗೆ  ಅತ್ಯುತ್ತಮ ಸಂಸದೀಯ ಪಟು ಎಂದು ಗೌರವಿಸಿ, ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ “ಅತ್ಯುತ್ತಮ ಶಾಸಕ ಪ್ರಶಸ್ತಿ” ಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಿದರು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದರು.

 

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರ; ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button