Kannada NewsLatest

ಕುತೂಹಲ ಮೂಡಿಸಿದ ಜಾರಕಿಹೊಳಿ ಸಹೋದರರ ನಡೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಬಸವರಾಜ್ ಬೊಮ್ಮಾಯಿ ಬೆಳಗಾವಿ ಪ್ರವಾಸ ಕೈಗೊಂಡಿದ್ದು, ಈ ಪ್ರವಾಸದ ವೇಳೆ ಜಾರಕಿಹೊಳಿ ಸಹೋದರು ಸಿಎಂ ಭೇಟಿಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ, ಅಧಿವೇಶನಕ್ಕೂ ಗೈರಾಗುವ ಮೂಲಕ ತಮ್ಮ ಮುನಿಸು ವ್ಯಕ್ತಪಡಿಸಿದ್ದರು. ಗೋಕಾಕ್ ನಲ್ಲಿಯೇ  ಇರುವ ಜಾರಕಿಹೊಳಿ ಸಹೋದರರು ಅಷ್ಟಾಗಿ ಮಾಧ್ಯಮಗಳಿಗೂ ಸಿಗುತ್ತಿಲ್ಲ.

ಇದೀಗ ಸಿಎಂ ಬೊಮ್ಮಾಯಿ ಇಂದಿನಿಂದ ಬೆಳಗಾವಿ ಪ್ರವಾಸಲ್ಲಿದ್ದು, ಮಹಾನಗರ ಪಾಲಿಕೆ ನೂತನ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ನಡುವೆ ಜಾರಕಿಹೊಳಿ ಸಹೋದರರು ಸಿಎಂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರಾ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ಸಿಎಂ ಬದಲಾವಣೆಯಾದರೂ ನೂತನ ಸಂಪುಟದಲ್ಲಿ ತಮಗೆ ಮಂತ್ರಿ ಸ್ಥಾನ ಸಿಗದಿರುವ ಬಗ್ಗೆ ಬೇಸರದಲ್ಲಿರುವ ಜಾರಕಿಹೊಳಿ ಬ್ರದರ್ಸ್, ಅಧಿವೇಶನಕ್ಕೂ ಗೈರಾಗಿ, ಗೋಕಾಕ್ ನಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

Home add -Advt

ಇನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ನಾಳೆ ಮೂಡಲಗಿಯಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಮುಂದಿನ ನಡೆಯಾದರೂ ಏನು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Related Articles

Back to top button