Latest

ಕಾರ್ವೆ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ ಮೇಲೆ ಇಡಿ ದಾಳಿ; 700 ಕೋಟಿ ಷೇರು ಜಪ್ತಿ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕಾರ್ವೆ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, 700 ಕೋಟಿ ರೂಪಾಯಿ ಷೇರು ಜಪ್ತಿ ಮಾಡಿದ್ದಾರೆ.

ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಹೈದರಾಬಾದ್ ನ ಕೆಎಸ್ ಬಿಎಲ್ (ಕಾರ್ವೆ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್) ಮೇಲೆ ದಾಳಿ ನಡೆಸಿದ್ದು, ಸಿ.ಪಾರ್ಥಸಾರಥಿ ಕುಟುಂಬದ ಒಡೆತನದ 700 ಕೋಟಿ ರೂ.ಷೇರುಗಳನ್ನು ಜಪ್ತಿ ಮಾಡಿದ್ದಾರೆ.

ಇಂಡಸ್ ಇಂದ್ ಬ್ಯಾಂಕ್, ಹೆಚ್ ಡಿ ಎಫ್ ಸಿ ಬ್ಯಾಂಕ್ ಗಳಿಂದ ಸಾಲ ಪಡೆದು ವಂಚನೆ ಮಾಡಿರುವ ಆರೋಪ ಸಿ.ಪಾರ್ಥಸಾರಥಿ ಕುಟುಂಬದ ಮೇಲೆ ಕೇಳಿಬಂದಿತ್ತು. ಅಲ್ಲದೇ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇಸ್ ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.
ಸೆ.27ರಂದು ಭಾರತ್ ಬಂದ್ ಗೆ ಕರೆ

Home add -Advt

Related Articles

Back to top button