ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಇಂದು ಸಂಜೆ ಮೂರು ರಾಜ್ಯಗಳಿಗೆ ಗುಲಾಬ್ ಚಂಡಮಾರುತ ಅಪ್ಪಳಿಸಲಿದ್ದು, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಹಾಗೂ ಓಡಿಶಾ ಕರಾವಳಿ ತೀರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಏಳಲಿದ್ದು, ‘ಗುಲಾಬ್ ಚಂಡಮಾರುತ’ ಎಂದು ಹೆಸರಿಡಲಾಗಿದೆ. ಈ ಚಂಡಮಾರುತದ ವೇಗ ಗಂಟೆಗೆ 70-80 ಕೀ.ಮಿ ಇರಲಿದ್ದು 90 ಕಿ.ಮೀ ವೇಗಕ್ಕೂ ಹೆಚ್ಚಬಹುದಾಗಿದೆ.
ಗುಲಾಬ್ ಚಂಡಮಾರುತ ಕಳಿಂಗಪಟ್ಟಣಂ, ವಿಶಾಖಪಟ್ಟಣಂ, ಗೋಪಾಲಪುರಂಗಳ ಮೂಲಕ ಹಾದುಹೋಗಲಿದ್ದು, ಭಾರಿ ಮಳೆಯಾಗಲಿದ್ದು, ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತ ಪೂರ್ವ ಹಾಗೂ ಮಧ್ಯ ಭಾರತದಲ್ಲಿ ಭಾರಿ ಮಳೆಗೆ ಕಾರಣವಾಗಲಿದೆ. ಪ್ರಮುಖವಾಗಿ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಓಡಿಶಾ ಕರಾವಳಿಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ