ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘತನೆಗಳು ನಡೆಸುತ್ತಿರುವ ಪ್ರತಿಭಟನೆ ರಾಜ್ಯಾದ್ಯಂತ ತೀವ್ರಗೊಂಡಿದ್ದು, ಪ್ರತಿಭಟನೆಯ ವೇಳೆ ಅವಘಡವೊಂದು ಸಂಭವಿಸಿದೆ.
ಬೆಂಗಳೂರಿನ ಗೊರಗುಂಟೆ ಪಾಳ್ಯ ಜಂಕ್ಷನ್ ನಲ್ಲಿ ರೈತ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಡಿಸಿಪಿ ಧರ್ಮೇಂದ್ರ ಕುಮಾರ್ ಅವರ ಕಾಲಿನ ಮೇಲೆ ರೈತ ಮುಖಂಡರ ಕಾರೊಂದು ಹರಿದಿದೆ. ಕೂದಲೆಳೆ ಅಂತರದಲ್ಲಿ ಡಿಸಿಪಿ ಪಾರಾಗಿದ್ದಾರೆ.
ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ರೈತ ಮುಖಂಡರನ್ನು ತಡೆದು, ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ಕೆಲ ರೈತರು ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರುಗಳನ್ನು ಹತ್ತಿ ಟೌನ್ ಹಾಲ್ ತಲುಪಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾರನ್ನು ತಡೆಯಲು ಮುಂದಾದ ವೇಳೆ ಡಿಸಿಪಿ ಕಾಲಿನ ಮೇಲೆ ಕಾರು ಹರಿದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಹೆಚ್ಚಿನ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
ವಿಶ್ವ ವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ