
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ 31ನೇ ಜಿಲ್ಲೆ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸಲಿದ್ದಾರೆ.
ಶನಿವಾರ ಸಂಜೆ 6 ಗಂಟೆಗೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ವಿಜಯ ನಗರ ಜಿಲ್ಲೆ ಅಧಿಕೃತವಾಗಿ ಅಸ್ಥಿತ್ವಕ್ಕೆ ಬರಲಿದೆ. ಸಚಿವ ಆನಂದ ಸಿಂಗ್ ಅವರ ಒತ್ತಾಸೆಯಂತೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಿಜಯನಗರ ಜಿಲ್ಲೆಯನ್ನು ಘೋಷಣೆ ಮಾಡಿದ್ದರು.
ರಡ್ಡಿ ಸಹೋದರರ ವಿರೋಧದ ಮಧ್ಯೆಯೂ ವಿಜಯನಗರ ಜಿಲ್ಲೆ ಘೋಷಣೆಯಾಗಿದೆ. ಆನಂದ ಸಿಂಗ್ ಕಾಂಗ್ರೆಸೇ್ ತೊರೆದು ಬಿಜೆಪಿ ಸೇರುವ ಸಂದರ್ಭದಲ್ಲಿ ವಿಜಯನಗರ ಜಿಲ್ಲೆ ಘೋಷಣೆಯ ಷರತ್ತು ವಿಧಿಸಿದ್ದರು.
ಶಾಸಕರು, ಸಂಸದರಿಂದ ಸಿಎಂ ಬೊಮ್ಮಾಯಿ ಭೇಟಿ