Latest

ಗ್ರಾಮ ಪಂಚಾಯಿತಿ ಅಧ್ಯಕ್ಷರ ಟೇಬಲ್ ಎದುರೇ ನೇಣು ಬಿಗಿದುಕೊಂಡ ನೌಕರ

ಪ್ರಗತಿವಾಹಿನಿ ಸುದ್ದಿ; ಗದಗ: ಕೆಲಸದಿಂದ ತೆಗೆದ ಕಾರಣಕ್ಕೆ ಮನನೊಂದ ಗ್ರಾಮ ಪಂಚಾಯಿತಿ ನೌಕರನೊಬ್ಬ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.

ಮಲ್ಲಪ್ಪ ಹೊಳಗುಂದಿ (28) ಆತ್ಮಹತ್ಯೆಗೆ ಶರಣಾದ ನೌಕರ. ಮಲ್ಲಪ್ಪ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Home add -Advt

ಆದರೆ ಇತ್ತೀಚೆಗೆ ಅವರನ್ನು ಕೆಲಸದಿಂದ ತೆಗೆಯಲಾಗಿತ್ತು. ಇದರಿಂದ ಮನನೊಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಕುಳಿತುಕೊಳ್ಳುವ ಟೇಬಲ್ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಭಯಂಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಡರಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಊರಿಗೆ ಬರುತ್ತೇನೆ ಎಂದ ನಟಿ ಸಾವಿಗೆ ಶರಣಾಗಿದ್ದೇಕೆ?

Related Articles

Back to top button