ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೆಡಿಕಲ್ ವಿದ್ಯಾರ್ಥಿ ಶುಲ್ಕ ದುರ್ಬಳಕೆ ಮಾಡಿಕೊಂಡಿರುವ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ ವಿರುದ್ಧ ಬೆಂಗಳೂರಿನ ವಿವಿಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
2016-17ರ ಶೈಕ್ಷಣಿಕ ಸಾಲಿನ ಮೆಡಿಕಲ್ ವಿದ್ಯಾರ್ಥಿ ಶುಲ್ಕ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಡಾ.ಸಿದ್ದರಾಮಯ್ಯ ಸಿ ಎನ್ನುವವರು ಅಪ್ಪಾಜಿಗೌಡ ಹಾಗೂ ಒಕ್ಕಲಿಗ ಸಂಘದ ಮಾಜಿ ಚೇರ್ ಮನ್ ಕಾಳೇಗೌಡ, ಮಾಜಿ ನಿರ್ದೇಶಕ ನರೇಂದ್ರ ಬಾಬು ಸೇರಿದಂತೆ ಹಲವರ ವಿರುದ್ಧ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ವಿವಿಪುರಂ ಪೊಲಿಸರು ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಒಟ್ಟು 70 ಲಕ್ಷ ರೂಪಾಯಿ ಹಣವನ್ನು ಸಂಸ್ಥೆಗೆ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ, ಕಾಳೇಗೌಡ, ನರೇಂದ್ರ ಬಾಬು ವಿರುದ್ಧ ಐಪಿಸಿ ಸೆಕ್ಷನ್ 420, 120b, 406, 417 ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ