ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದ 2 ವರ್ಷದ ಹೆಣ್ಣು ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸೆ.23ರಂದು ಮಗು ಪತ್ತೆಯಾಗಿತ್ತು. ದುಷ್ಕರ್ಮಿಗಳು ಮಗುವನ್ನು ಗದ್ದೆಗೆ ಬಿಸಾಕಿ ಹೋಗಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕಂಡ ಸ್ಥಳೀಯರು ಹಾಗೂ ವಾಹನ ಸವಾರರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಗುವಿನ ಮೈಮೇಲೆ ಗೇರುಬೀಜದಿಂದ ಸುಟ್ಟಿರುವ ಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಗುರುತು ಪತ್ತೆಯಾಗುವ ಮುನ್ನವೇ ಚಿಕಿತ್ಸೆ ಫಲಿಸದೇ ಇದೀಗ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಪ್ರಯಾಣಿಕರ ಬಸ್ ಭೀಕರ ಅಪಘಾತ; 7 ಜನರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ