
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಗೆ ಸಂಕಷ್ಟ ಎದುರಾಗಿದ್ದು, ನಿಶಾ ವಿರುದ್ಧ ಮಂಡ್ಯದ ಟಿಎಪಿಸಿಎಂಎಸ್ ಕಾನೂನು ಹೋರಾಟಕ್ಕೆ ಮುಂದಾಗಿದೆ.
ಡೆಕ್ಕನ್ ಫೀಲ್ಡ್ ಆಗ್ರೋ ಇಂಡಸ್ಟ್ರೀಸ್ ಮಾಲಕಿಯಾಗಿರುವ ನಿಶಾ, 2017ರಲ್ಲಿ ಮಂಡ್ಯ ಜಿಲ್ಲೆ ಮದ್ದೂರಿನ ಟಿಎಪಿಸಿಎಂಎಸ್ ಗೆ ಸೇರಿದ ಗೋದಾಮು ಬಾಡಿಗೆ ಪಡೆದುಕೊಂಡಿದ್ದರು. ಆದರೆ ಒಪ್ಪಂದದಂತೆ ನಿಶಾ ಬಾಡಿಗೆ ಹಣ ಹಾಗೂ ಕಂದಾಯಯವನ್ನು ಪಾವತಿ ಮಾಡಿಲ್ಲ.
2018ರಿಂದಲೂ ಹಣ ಪಾವತಿಸಿದೇ ಬಾಕಿ ಉಳಿಸಿಕೊಂಡಿದ್ದಾರೆ. ಗೋದಾಮು ಹಣ 42.47 ಲಕ್ಷ ರೂ ಬಾಕಿ ಉಳಿಸಿಕೊಂಡಿದ್ದು, ಪುರಸಭೆಯಲ್ಲಿ 4.78 ಲಕ್ಷ ರೂಪಾಯಿ ಕಂದಾಯ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಎಪಿಸಿಎಂಎಸ್ ನಿಶಾ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದೆ.
ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ