ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೋದಿ ಬರಿ ಸುಳ್ಳು ಹೇಳುವುದರಲ್ಲೇ ಕಾಲ ಕಳೆಯುತ್ತಿದ್ದಾರೆ, ಅವರನ್ನು ಹೀಗೆ ಬಿಟ್ಟರೆ ಭಿಕ್ಷೇ ಬೇಡುವ ಪರಿಸ್ಥಿತಿ ಬರುತ್ತದೆ ಎಂದು ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ, ವಿಶ್ವದ ಅನೇಕ ದಿಗ್ಗಜರು ಗಾಂಧೀಜಿಯವರಿಂದ ಸ್ಫೂರ್ತಿ ಪಡೆದರು. ಆದರೆ ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಬರಿ ಸುಳ್ಳು ಹೇಳುತ್ತಾರೆ. ಅವರು ಏನೆ ಹೇಳಿದರೂ ಅದನ್ನು ಉಲ್ಟಾ ಅರ್ಥಮಾಡಿಕೊಳ್ಳಬೇಕು. ನಾನು ದೇಶದ ಕಾವಲುಗಾರ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದರು. ಅಂಬಾನಿ, ದನಾನಿಯಂತಹ ಶ್ರೀಮಂತರಿಗೆ ಲೂಟಿ ಮಾಡುವಲು ಬಿಟ್ಟಿದ್ದಾರೆ. ಕಳೆದ ಒಂದು ವರ್ಷದಲ್ಲಿ ಅದಾನಿ ಆಸ್ತಿ ನಾಲ್ಕು ಪಟ್ಟು ಹೆಚ್ಚಾಗಿದೆ. ದೇಶದ ಬಡ ಜನರ ಬಗ್ಗೆ ಮೋದಿ ಸರ್ಕಾರಕ್ಕೆ ಗಮನವಿಲ್ಲ, ಒಂದು ವರ್ಷದಿಂದ ದೇಶಾದ್ಯಂತ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೂ ಮೋದಿ ತಲೆಕೆಡಿಸಿಕೊಂಡಿಲ್ಲ, ರೈತರ ಹೋರಾಟ ಕಾಂಗ್ರೆಸ್ ಪ್ರೇರಿತ ಎನ್ನುತ್ತಿದ್ದಾರೆ. ಮೋದಿಯವರನ್ನು ಹೀಗೆ ಬಿಟ್ಟರೆ ಭಿಕ್ಷೆ ಬೇಡುವ ಪರಿಸ್ಥಿತಿ ಬರುತ್ತದೆ ಎಂದು ಗುಡುಗಿದ್ದಾರೆ.
ಗಾಂಧೀಜಿ ಕೊಂದವನನ್ನು ದೇಶಭಕ್ತ ಎಂದು ಬಿಜೆಪಿ ನಾಯಕರು ಕರೆಯುತ್ತಿದ್ದಾರೆ. ಇವರಿಗೆ ನಾಚಿಕೆ ಆಗಬೇಕು. ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿಲ್ಲ ಆದರೆ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ನಾಶವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಪತ್ನಿಗಾಗಿ ಸೀರೆ ಖರೀದಿಸಿದ ಸಿಎಂ; ಬಾರಪ್ಪ, ಮನೆಯವರಿಗೆ ಸೀರೆ ಖರೀದಿ ಮಾಡು ಎಂದು ವಿಜಯೇಂದ್ರಗೂ ಸೂಚಿಸಿದ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ